ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್
ಬೆಂಗಳೂರು, 08 ಜೂನ್ (ಹಿ.ಸ.) : ಆ್ಯಂಕರ್ : ಎಐಸಿಸಿ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸೂರಜ್ ಹೆಗ್ಡೆ ಅವರ ನಿಧನದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಅಂತಿಮ ದರ್ಶನ ಪಡೆದು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,
ಸೂರಜ್ ಹೆಗಡೆ


ಬೆಂಗಳೂರು, 08 ಜೂನ್ (ಹಿ.ಸ.) :

ಆ್ಯಂಕರ್ : ಎಐಸಿಸಿ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸೂರಜ್ ಹೆಗ್ಡೆ ಅವರ ನಿಧನದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಅಂತಿಮ ದರ್ಶನ ಪಡೆದು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೂರಜ್ ಹೆಗ್ಡೆ ಅವರನ್ನು ಬಾಲ್ಯದಿಂದಲೂ ಪರಿಚಯವಾಗಿದ್ದು, ಅವರ ಕುಟುಂಬದೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದೇನೆ ಎಂದು ಸ್ಮರಿಸಿದರು. ಸೂರಜ್ ಹೆಗ್ಡೆ ಅವರ ತಂದೆ ಹಾಗೂ ತಾತ ಅರಸು ಅವರೊಂದಿಗೆ ಸಹ ನಿಕಟ ಸಂಪರ್ಕವಿತ್ತು ಎಂದು ಹೇಳಿದರು.

ಅರಸು ಅವರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹೆಸರಾಂತ ನಾಯಕರು. ಅವರ ಮೊಮ್ಮಗನಾಗಿದ್ದರೂ ಸೂರಜ್ ಹೆಗ್ಡೆ ಅವರಿಗೆ ಯಾವುದೇ ಅಹಂಕಾರ ಇರಲಿಲ್ಲ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದಲ್ಲಿ ದುಡಿದು, ನಂತರ ಎಐಸಿಸಿ ಮಟ್ಟದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು ಎಂದು ಹರಿಪ್ರಸಾದ್ ಹೇಳಿದರು.

ಸೂರಜ್ ಹೆಗ್ಡೆ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಅತ್ಯಂತ ಆಪ್ತರಾಗಿದ್ದರು. ಪಕ್ಷದ ಸಂಘಟನಾ ಕಾರ್ಯಗಳಲ್ಲಿ ಮಹತ್ವದ ಪಾತ್ರ ವಹಿಸಿದ್ದ ಅವರು, ತಮ್ಮ ಸರಳತೆ ಮತ್ತು ಸಮರ್ಪಣಾ ಮನೋಭಾವದಿಂದ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು ಎಂದು ಅವರು ಹೇಳಿದರು.

ಸೂರಜ್ ಹೆಗ್ಡೆ ಅವರ ಅಗಲಿಕೆ ಅವರ ಕುಟುಂಬಕ್ಕೆ ಮಾತ್ರವಲ್ಲ, ಇಡೀ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷರು ಸಂತಾಪ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande