ನುಡಿದಂತೆ ಯುವಜನತೆಗೆ ಉದ್ಯೋಗ ಭದ್ರತೆ : ಮುಖ್ಯಮಂತ್ರಿ
ಬೆಂಗಳೂರು, 08 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದ ಯುವಜನತೆಗೆ ಉದ್ಯೋಗ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ 3,395 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಇಂದಿನಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮುಖ್
Cm post


ಬೆಂಗಳೂರು, 08 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದ ಯುವಜನತೆಗೆ ಉದ್ಯೋಗ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ 3,395 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಇಂದಿನಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯದ ಯುವಕರಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.

ಅರ್ಹ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ, ಒಂದು ಬಾರಿಗೆ ಅನ್ವಯವಾಗುವ ವಿಶೇಷ ಕ್ರಮವಾಗಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ. ಇದರಿಂದ ಕೋವಿಡ್ ಅವಧಿ ಸೇರಿದಂತೆ ವಿವಿಧ ಕಾರಣಗಳಿಂದ ಉದ್ಯೋಗಾವಕಾಶ ಕಳೆದುಕೊಂಡ ಅಭ್ಯರ್ಥಿಗಳಿಗೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಅವರು ತಿಳಿಸಿದ್ದಾರೆ.

“ನುಡಿದಂತೆ ನಡೆಯುವ ಸರ್ಕಾರವಾಗಿ ಯುವಜನತೆಗೆ ಉದ್ಯೋಗ ಭದ್ರತೆ ಒದಗಿಸಲು ಬದ್ಧರಾಗಿದ್ದೇವೆ. ಪೊಲೀಸ್ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿಯ ಮೂಲಕ ಸಾವಿರಾರು ಯುವಕರಿಗೆ ಉದ್ಯೋಗಾವಕಾಶ ಸಿಗಲಿದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande