ಬಾದಾಮಿ ಇತಿಹಾಸ ಸಂರಕ್ಷಣೆ ಮತ್ತು ಅಭಿವೃದ್ಧಿ ಕನಸುಗಾರ ಕಿರಣ್ ಕಟ್ಟಿಮನಿ
ಬಾಗಲಕೋಟೆ, 08 ಜೂನ್ (ಹಿ.ಸ.) : ಆಂಕರ್ : ವಿಶ್ವ ಪ್ರಸಿದ್ಧ ಚಾಲುಕ್ಯರ ಐತಿಹಾಸಿಕ ನಗರಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತನ್ನ ಸಾಂಸ್ಕೃತಿಕ, ಐತಿಹಾಸಿಕ ಹಾಗೂ ಪ್ರವಾಸೋದ್ಯಮದ ವೈಭವದಿಂದ ದೇಶ-ವಿದೇಶಗಳಲ್ಲಿ ಹೆಸರುವಾಸಿಯಾಗಿದೆ. ಇಂತಹ ಐತಿಹಾಸಿಕ ಪರಂಪರೆಯ ತಾಣದ ಸಂರಕ್ಷಣೆ ಹಾಗೂ ಸಮಗ್ರ ಅಭಿವೃದ್ಧಿಯ ಗುರಿಯ
ಬಾದಾಮಿ


ಬಾಗಲಕೋಟೆ, 08 ಜೂನ್ (ಹಿ.ಸ.) :

ಆಂಕರ್ : ವಿಶ್ವ ಪ್ರಸಿದ್ಧ ಚಾಲುಕ್ಯರ ಐತಿಹಾಸಿಕ ನಗರಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತನ್ನ ಸಾಂಸ್ಕೃತಿಕ, ಐತಿಹಾಸಿಕ ಹಾಗೂ ಪ್ರವಾಸೋದ್ಯಮದ ವೈಭವದಿಂದ ದೇಶ-ವಿದೇಶಗಳಲ್ಲಿ ಹೆಸರುವಾಸಿಯಾಗಿದೆ. ಇಂತಹ ಐತಿಹಾಸಿಕ ಪರಂಪರೆಯ ತಾಣದ ಸಂರಕ್ಷಣೆ ಹಾಗೂ ಸಮಗ್ರ ಅಭಿವೃದ್ಧಿಯ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅಭಿವೃದ್ಧಿ ಚಿಂತಕ ಕಿರಣ್ ಕಟ್ಟಿಮನಿ ಅವರು ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರ ಗಮನ ಸೆಳೆಯುತ್ತಿದ್ದಾರೆ.

ಬಾದಾಮಿ ನಾಡಿನ ಶ್ರೀಮಂತ ಇತಿಹಾಸ, ಪುರಾತತ್ವ ಸಂಪತ್ತು ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸುವ ಉದ್ದೇಶದಿಂದ ಹಲವು ಜನಜಾಗೃತಿ ಕಾರ್ಯಕ್ರಮಗಳು, ಸಂರಕ್ಷಣಾ ಚಟುವಟಿಕೆಗಳು ಹಾಗೂ ಅಭಿವೃದ್ಧಿ ಚಿಂತನೆಗಳ ಮೂಲಕ ಅವರು ಕ್ಷೇತ್ರದ ಅಭಿವೃದ್ಧಿಗೆ ಹೊಸ ಆಯಾಮ ನೀಡುತ್ತಿದ್ದಾರೆ. ಇತಿಹಾಸದ ಹೆಮ್ಮೆಯೊಂದಿಗೆ ಅಭಿವೃದ್ಧಿಯ ಹಾದಿಯಲ್ಲಿ ಬಾದಾಮಿ ಎಂಬ ಪರಿಕಲ್ಪನೆಯನ್ನು ಸಾಕಾರಗೊಳಿಸಲು ನಿರಂತರವಾಗಿ ಶ್ರಮಿಸುತ್ತಿರುವ ಅವರ ಕಾರ್ಯಚಟುವಟಿಕೆಗಳು ಸ್ಥಳೀಯರಲ್ಲಿ ಮೆಚ್ಚುಗೆಗೆ ಪಾತ್ರವಾಗಿವೆ.

ಚಾಲುಕ್ಯರ ಕಾಲದ ಶಿಲ್ಪಕಲೆ, ಗುಹಾಂತರ ದೇವಾಲಯಗಳು, ಐತಿಹಾಸಿಕ ಸ್ಮಾರಕಗಳು ಹಾಗೂ ಪ್ರವಾಸಿ ತಾಣಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತಿರುವ ಕಿರಣ್ ಕಟ್ಟಿಮನಿ ಅವರು, ಬಾದಾಮಿಯನ್ನು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಇನ್ನಷ್ಟು ಬಲವಾಗಿ ಗುರುತಿಸುವ ಕನಸನ್ನು ಹೊಂದಿದ್ದಾರೆ. ಪ್ರವಾಸೋದ್ಯಮದ ಬೆಳವಣಿಗೆಯಿಂದ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳು ಹೆಚ್ಚಾಗುವ ಜೊತೆಗೆ ಪ್ರದೇಶದ ಆರ್ಥಿಕ ಚಟುವಟಿಕೆಗಳಿಗೂ ಹೊಸ ಚೈತನ್ಯ ದೊರೆಯಲಿದೆ ಎಂಬುದು ಅವರ ಅಭಿಪ್ರಾಯವಾಗಿದೆ.

ಶಿಕ್ಷಣ, ಸಂಸ್ಕೃತಿ, ಸಾಮಾಜಿಕ ಸೇವೆ ಹಾಗೂ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಕ್ಷೇತ್ರಗಳಲ್ಲಿಯೂ ಅವರು ವಿಶೇಷ ಆಸಕ್ತಿ ತೋರಿದ್ದು, ಜನಸಾಮಾನ್ಯರ ಬದುಕಿನ ಗುಣಮಟ್ಟ ಸುಧಾರಣೆಗೆ ಹಲವಾರು ಯೋಜನೆಗಳ ಕುರಿತು ಚಿಂತನೆ ನಡೆಸುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯಗಳ ವಿಸ್ತರಣೆ, ಯುವಕರ ಸಬಲೀಕರಣ, ಕೌಶಲ್ಯಾಭಿವೃದ್ಧಿ ಮತ್ತು ಸಾಮಾಜಿಕ ಜಾಗೃತಿಗೆ ಆದ್ಯತೆ ನೀಡುತ್ತಿರುವುದು ಅವರ ಕಾರ್ಯಶೈಲಿಯ ವಿಶೇಷತೆಯಾಗಿದೆ.

ಬಾದಾಮಿ ಭಾಗದ ಯುವಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸುವುದರ ಜೊತೆಗೆ, ಪ್ರವಾಸೋದ್ಯಮ ಆಧಾರಿತ ಉದ್ಯೋಗ ಸೃಷ್ಟಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಅವರು ನಿರಂತರವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಐತಿಹಾಸಿಕ ಪರಂಪರೆಯನ್ನು ಉಳಿಸಿಕೊಂಡು ಆಧುನಿಕ ಅಭಿವೃದ್ಧಿಯತ್ತ ಸಾಗುವ ಬಾದಾಮಿ ನಿರ್ಮಾಣದ ಕನಸನ್ನು ಅವರು ಹೊಂದಿದ್ದಾರೆ. ಸ್ಥಳೀಯರು ಮತ್ತು ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಕಿರಣ್ ಕಟ್ಟಿಮನಿ ಅವರ ಅಭಿವೃದ್ಧಿ ಪರ ಚಿಂತನೆಗಳನ್ನು ಶ್ಲಾಘಿಸುತ್ತಿದ್ದು, ಬಾದಾಮಿಯ ಸರ್ವಾಂಗೀಣ ಅಭಿವೃದ್ಧಿಗೆ ಇಂತಹ ನಾಯಕತ್ವ ಮತ್ತು ದೂರದೃಷ್ಟಿಯ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಐತಿಹಾಸಿಕ ವೈಭವ, ಸಾಂಸ್ಕೃತಿಕ ಶ್ರೀಮಂತಿಕೆ ಹಾಗೂ ಅಭಿವೃದ್ಧಿಯ ಕನಸುಗಳನ್ನು ಒಟ್ಟುಗೂಡಿಸಿಕೊಂಡು ಬಾದಾಮಿಯ ಭವಿಷ್ಯ ರೂಪಿಸುವ ದಿಸೆಯಲ್ಲಿ ಕಿರಣ್ ಕಟ್ಟಿಮನಿ ಅವರು ನಡೆಸುತ್ತಿರುವ ಪ್ರಯತ್ನಗಳು ಗಮನಾರ್ಹವಾಗಿದ್ದು, ಬಾದಾಮಿಯನ್ನು ಇನ್ನಷ್ಟು ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಸುವ ಆಶಯವನ್ನು ಜನರು ವ್ಯಕ್ತಪಡಿಸುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande