ವಸತಿ ನಿಲಯ ಕಟ್ಟಡ ಕಾಮಗಾರಿಗೆ ಶಾಸಕ ಡಾ. ಚಂದ್ರು ಲಮಾಣಿ ಭೂಮಿಪೂಜೆ
ಗದಗ, 08 ಜೂನ್ (ಹಿ.ಸ.) : ಆ್ಯಂಕರ್ : ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ಉತ್ತಮ ಶೈಕ್ಷಣಿಕ ವಾತಾವರಣ ಹಾಗೂ ಗುಣಮಟ್ಟದ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಮೆಟ್ರಿಕ್ ನಂತರದ ಬಾಲಕಿ
ಫೋಟೋ


ಗದಗ, 08 ಜೂನ್ (ಹಿ.ಸ.) :

ಆ್ಯಂಕರ್ : ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ಉತ್ತಮ ಶೈಕ್ಷಣಿಕ ವಾತಾವರಣ ಹಾಗೂ ಗುಣಮಟ್ಟದ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ನೂತನ ಕಟ್ಟಡ ಕಾಮಗಾರಿಗೆ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಚಂದ್ರು ಲಮಾಣಿ ಅವರು, ಶಿಕ್ಷಣವು ಸಮಾಜದ ಅಭಿವೃದ್ಧಿಗೆ ಮೂಲ ಆಧಾರವಾಗಿದ್ದು, ವಿಶೇಷವಾಗಿ ಗ್ರಾಮೀಣ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರಿಗೆ ಉತ್ತಮ ಶೈಕ್ಷಣಿಕ ಅವಕಾಶಗಳು ದೊರೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಹೇಳಿದರು. ವಿದ್ಯಾರ್ಥಿನಿಯರು ಸುರಕ್ಷಿತ ಮತ್ತು ಅನುಕೂಲಕರ ವಾತಾವರಣದಲ್ಲಿ ಶಿಕ್ಷಣ ಪಡೆಯಲು ವಸತಿ ನಿಲಯಗಳ ನಿರ್ಮಾಣ ಅತ್ಯಂತ ಅಗತ್ಯವಾಗಿದ್ದು, ಈ ನೂತನ ಕಟ್ಟಡವು ವಿದ್ಯಾರ್ಥಿನಿಯರ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ತಿಳಿಸಿದರು.

ಬೆಳ್ಳಟ್ಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಅನೇಕ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣಕ್ಕಾಗಿ ದೂರದ ಪ್ರದೇಶಗಳಿಗೆ ತೆರಳಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಸುಸಜ್ಜಿತ ವಸತಿ ನಿಲಯ ನಿರ್ಮಾಣವಾಗುತ್ತಿರುವುದು ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರಿಗೆ ಸಂತಸದ ಸಂಗತಿಯಾಗಿದೆ. ಸರ್ಕಾರದ ಅನುದಾನದಲ್ಲಿ ನಿರ್ಮಾಣವಾಗಲಿರುವ ಈ ಕಟ್ಟಡದಲ್ಲಿ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಭೂಮಿಪೂಜೆ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿ ಕಾಮಗಾರಿಯ ಯಶಸ್ವಿ ಅನುಷ್ಠಾನಕ್ಕೆ ಶುಭ ಹಾರೈಸಿದರು.

ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಎಸ್.ಎಸ್. ಪಾಟೀಲ, ತಿಮ್ಮರೆಡ್ಡಿ ಮರೆಡ್ಡಿ, ಶಂಕರ ಮರಾಠೆ, ಡಿ.ವೈ. ಹುನಗುಂದ, ಮೋಹನ್ ಗುತ್ತೆಮ್ಮನವರ, ಮಹೇಶ್ ಬಡ್ನಿ, ಕೊಟ್ರೇಶ್ ಸಜ್ಜನರ, ಫಕೀರೇಶ ರಟ್ಟಿಹಳ್ಳಿ, ಗಂಗಾಧರ ಮೆಣಸಿನಕಾಯಿ, ಸುರೇಶ್ ಬೆಲಹುಣಸಿ, ರಾಜು ಮಾಂಡ್ರೆ, ಕೆ.ವಿ. ಅಕ್ಕೂರ, ಹನುಮಂತಗೌಡ ಪಾಟೀಲ, ಶೇಖಣ್ಣ ಕುಲಕರ್ಣಿ, ಅಪ್ಪಣ್ಣ ಸಾಲಿ, ಶರಣಬಸವ ಚನ್ನೂರ, ಜಾನು ಲಮಾಣಿ, ರಾಜೀವ್ ರೆಡ್ಡಿ, ಮಲ್ಲನಗೌಡ ಪಾಟೀಲ, ಬಸವರಾಜ್ ಬೆಳಗಟ್ಟಿ, ಪರಶುರಾಮ ಗೋಪಾಲಿ, ಮಧುಚಂದ್ರ ಮರೆಡ್ಡಿ, ವಿಶ್ವನಾಥ ಪಾಟೀಲ, ಮದನಲಾಲ್ ಬಪ್ನಾ ಸೇರಿದಂತೆ ಹಲವು ಗಣ್ಯರು, ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಬೆಳ್ಳಟ್ಟಿ ಗ್ರಾಮದಲ್ಲಿ ಆರಂಭಗೊಂಡಿರುವ ಈ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯು ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಹೊಸ ಉತ್ತೇಜನ ನೀಡಲಿದ್ದು, ಹಿಂದುಳಿದ ವರ್ಗಗಳ ಶೈಕ್ಷಣಿಕ ಸಬಲೀಕರಣದ ದಿಸೆಯಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande