ಆಧ್ಯಾತ್ಮವು ಸತ್ಯದ ಬೆಳಕು ಮೂಡಿಸುತ್ತದೆ : ಸ್ವಾಮಿ ನಿರ್ಭಯಾನಂದ ಸರಸ್ವತಿ
ಬಳ್ಳಾರಿ, 08 ಜೂನ್ (ಹಿ.ಸ.) : ಆ್ಯಂಕರ್ : ಆಧ್ಯಾತ್ಮವು ಸತ್ಯದ ಬಗ್ಗೆ ಸಂಪೂರ್ಣ ಪರಿಚಯ ಮಾಡಿಕೊಡುವ ಸಾಧನವಾಗಿ ಜಗತ್ತಿಗೆ ಜ್ಞಾನದ ಬೆಳಕು ನೀಡುವ ಸಾಮಥ್ರ್ಯವನ್ನು ಪಡೆದಿದೆ ಎಂದು ವಿಜಯಪುರ ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ನಿರ್ಭಯಾನಂದ ಸರಸ್ವತಿ ಅವರು ತಿಳಿಸಿದ್ದಾರೆ. `ಪಾಂಚಜನ್ಯ''ದಲ್
ಆಧ್ಯಾತ್ಮವು ಸತ್ಯದ ಬೆಳಕು ಮೂಡಿಸುತ್ತದೆ : ಸ್ವಾಮಿ ನಿರ್ಭಯಾನಂದ ಸರಸ್ವತಿ


ಆಧ್ಯಾತ್ಮವು ಸತ್ಯದ ಬೆಳಕು ಮೂಡಿಸುತ್ತದೆ : ಸ್ವಾಮಿ ನಿರ್ಭಯಾನಂದ ಸರಸ್ವತಿ


ಆಧ್ಯಾತ್ಮವು ಸತ್ಯದ ಬೆಳಕು ಮೂಡಿಸುತ್ತದೆ : ಸ್ವಾಮಿ ನಿರ್ಭಯಾನಂದ ಸರಸ್ವತಿ


ಬಳ್ಳಾರಿ, 08 ಜೂನ್ (ಹಿ.ಸ.) :

ಆ್ಯಂಕರ್ : ಆಧ್ಯಾತ್ಮವು ಸತ್ಯದ ಬಗ್ಗೆ ಸಂಪೂರ್ಣ ಪರಿಚಯ ಮಾಡಿಕೊಡುವ ಸಾಧನವಾಗಿ ಜಗತ್ತಿಗೆ ಜ್ಞಾನದ ಬೆಳಕು ನೀಡುವ ಸಾಮಥ್ರ್ಯವನ್ನು ಪಡೆದಿದೆ ಎಂದು ವಿಜಯಪುರ ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ನಿರ್ಭಯಾನಂದ ಸರಸ್ವತಿ ಅವರು ತಿಳಿಸಿದ್ದಾರೆ.

`ಪಾಂಚಜನ್ಯ'ದಲ್ಲಿ ನಡೆದ ವಿವೇಕಮಂಟಪ-ಉಪನ್ಯಾಸ ಮಾಲಿಕೆಯಲ್ಲಿ ವಿವೇಕ ಲೀಲಾಮೃತ ಕುರಿತು ಅವರು ಉಪನ್ಯಾಸ ನೀಡಿ, ಆಧ್ಯಾತ್ಮ ಎಂದರೆ ಅದೊಂದು ವಿಜ್ಞಾನ. ಸತ್ಯವನ್ನು ಪರಿಚಯಿಸುವುದೇ ವಿಜ್ಞಾನ. ಶಂಕರಾಚಾರ್ಯರು ಸಹ ಇದನ್ನೇ ಹೇಳಿದ್ದಾರೆ. ಭಾರತ ಆಧ್ಯಾತ್ಮಿಕ ಚಿಂತನೆಯ, ಸಾಧು-ಸಂತರ ದೇಶವಾಗಿ ಆಧ್ಯಾತ್ಮಿಕವಾಗಿ ಸಾಧನೆ ಮಾಡಬಯಸುವ ಸಾವಿರಾರು ಜನರು ಭಾರತಕ್ಕೆ ಬರುತ್ತಿದ್ದಾರೆ ಎಂದರು.

ಭಾರತೀಯರು ಪಾಶ್ಚಾತ್ಯ ಜೀವನಶೈಲಿಯಲ್ಲಿ ತೊಡಗಿಕೊಂಡು ಭಾರತ ದೇಶದ ನಿಜವಾದ ಸಾಮಥ್ರ್ಯವನ್ನೇ ಮರೆತಿದ್ದಾರೆ. ಭಾರತೀಯರ ಮನಸ್ಥಿತಿಯನ್ನು ಈ ಹಿಂದೆಯೇ ಅರಿತಿದ್ದ ಸ್ವಾಮಿ ವಿವೇಕಾನಂದರು ಯುವಕರ ಕುರಿತು, `ಏಳಿ ಎದ್ದೇಳಿ' ಎಂದು ಕರೆ ನೀಡಿದ್ದರು. ಆದರೆ, ಯುವಕರು ಭಾರತೀಯತೆನ್ನು ಮೈಗೂಡಿಸಿಕೊಳ್ಳದೆ, ಆಧ್ಯಾತ್ಮಿಕ ಶಕ್ತಿಯನ್ನು ಸದ್ಭಳಕೆ ಮಾಡಿಕೊಳ್ಳದೆ ಪಾಶ್ಚಾತ್ಯ ಜೀವನಶೈಲಿಯೇ ಶ್ರೇಷ್ಠ ಎಂಬ ಮೌಢ್ಯದಲ್ಲಿದ್ದಾರೆ ಎಂದರು.

ಕರ್ನಾಟಕ ಗ್ರಾಮೀಣ ಬ್ಯಾಂಕಿನ ನಿವೃತ್ತ ಹಿರಿಯ ವ್ಯವಸ್ಥಾಪಕ ಆರ್.ಎಸ್. ತಿಮ್ಮನಗೌಡ, ವಿಶ್ವಬ್ರಾಹ್ಮಣ ವೈದಿಕ ಪ್ರತಿಷ್ಠಾನದ ಕಾರ್ಯದರ್ಶಿ ವೆಂಕಟೇಶ ಬಡಿಗೇರ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು.

ಕುಮಾರಿ ತಸ್ಮಯಿ ಅವರು ಭಕ್ತಿ ಸಂಗೀತ ಪ್ರಸ್ತುತಪಡಿಸಿದರು. ದೊಡ್ಡಬಸವ ಗವಾಯಿ ಡಿ.ಕಗ್ಗಲ್ ಹಾಗೂ ಮುದ್ದಟನೂರು ತಿಪ್ಪೇಸ್ವಾಮಿ ಹಾರ್ಮೋನಿಯಂ ಮತ್ತು ಯೋಗೀಶ್ ಸಂಗನಕಲ್ಲು ತಬಲಾ ಸಾಥ್ ನೀಡಿದರು. ವಿವೇಕ ಮಂಟಪದ ಪ್ರಭುದೇವ ಕಪ್ಪಗಲ್ಲು ಹಾಗೂ ಎರ್ರಿಸ್ವಾಮಿ ಚಿಲಕರಾಯಿ ಅವರು ಕಾರ್ಯಕ್ರಮ ನಿರ್ವಹಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande