ಬಿಜೆಪಿ ಅಭ್ಯರ್ಥಿಗಳಿಗೆ ಶುಭ ಹಾರೈಸಿದ ವಿಜಯೇಂದ್ರ
ಬೆಂಗಳೂರು, 08 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ವಿಧಾನ ಸಭೆಯಿಂದ ರಾಜ್ಯ ಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಡಾ. ಎಂ. ನಾಗರಾಜ್ ಅವರಿಗೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳಾಗಿರುವ ಲಿಂಗರಾಜ್ ಪಾಟೀಲ್ ಮತ್ತು ರಘು ಕೌಟಿಲ್ಯ ಅವರಿಗೆ ಬಿಜೆ
Bjp candidates


ಬೆಂಗಳೂರು, 08 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ವಿಧಾನ ಸಭೆಯಿಂದ ರಾಜ್ಯ ಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಡಾ. ಎಂ. ನಾಗರಾಜ್ ಅವರಿಗೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳಾಗಿರುವ ಲಿಂಗರಾಜ್ ಪಾಟೀಲ್ ಮತ್ತು ರಘು ಕೌಟಿಲ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಅಭ್ಯರ್ಥಿಗಳ ಚುನಾವಣಾ ಯಶಸ್ಸಿಗೆ ಶುಭ ಹಾರೈಸಿದ್ದು, ರಾಜ್ಯದ ಹಿತರಕ್ಷಣೆ ಮತ್ತು ಜನಸಾಮಾನ್ಯರ ಆಶೋತ್ತರಗಳಿಗೆ ಪೂರಕವಾಗಿ ಸದನಗಳಲ್ಲಿ ಪರಿಣಾಮಕಾರಿ ಕಾರ್ಯನಿರ್ವಹಣೆ ನಡೆಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿರುವ ಮಾ.ನಾಗರಾಜ ಅವರಿಗೆ ಅಭಿನಂದನೆ ಸಲ್ಲಿಸಿರುವ ವಿಜಯೇಂದ್ರ, ಸದನದಲ್ಲಿ ರಾಜ್ಯದ ಪರವಾಗಿ ಸಮರ್ಥ ಧ್ವನಿಯಾಗಲಿ ಎಂದು ಆಶಿಸಿದ್ದಾರೆ.

ಇದೇ ವೇಳೆ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿರುವ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರಿಗೂ ಶುಭಾಶಯ ಕೋರಿದ್ದಾರೆ.

“ಚುನಾವಣೆಯಲ್ಲಿ ಯಶಸ್ಸು ಸಾಧಿಸಿ, ರಾಜ್ಯದ ಅಭಿವೃದ್ಧಿ, ಸಾರ್ವಜನಿಕ ಹಿತಾಸಕ್ತಿ ಹಾಗೂ ಜನರ ನಿರೀಕ್ಷೆಗಳಿಗೆ ತಕ್ಕಂತೆ ಕಾರ್ಯನಿರ್ವಹಿಸಿ. ನಾಡಿನ ಪ್ರಗತಿ ಮತ್ತು ಜನಸೇವೆಯ ನಿಮ್ಮ ಮುಂದಿನ ಪಯಣ ಅತ್ಯಂತ ಸಾರ್ಥಕವಾಗಿರಲಿ” ಎಂದು ವಿಜಯೇಂದ್ರ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande