ಸಂಗನಾಳ ಅನ್ನದಾನೇಶ್ವರ ಸರ್ಕಾರಿ ಪ್ರೌಢಶಾಲೆ : ವಿಶ್ವ ತಂಬಾಕು ರಹಿತ ದಿನಾಚರಣೆ
ಕೊಪ್ಪಳ, 08 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಕೊಪ್ಪಳ ಹಾಗೂ ಶ್ರೀ ಅನ್ನದಾನೇಶ್ವರ ಸರ್ಕಾರಿ ಪ್ರೌಢಶಾಲೆ, ಸಂಗನಾಳ ಇವರುಗಳ ಸಂಯುಕ್ತಾಶ್ರಯದಲ್ಲಿ “ವಿಶ್ವ ತಂ
ಸಂಗನಾಳ ಅನ್ನದಾನೇಶ್ವರ ಸರ್ಕಾರಿ ಪ್ರೌಢಶಾಲೆ : ವಿಶ್ವ ತಂಬಾಕು ರಹಿತ ದಿನಾಚರಣೆ


ಸಂಗನಾಳ ಅನ್ನದಾನೇಶ್ವರ ಸರ್ಕಾರಿ ಪ್ರೌಢಶಾಲೆ : ವಿಶ್ವ ತಂಬಾಕು ರಹಿತ ದಿನಾಚರಣೆ


ಕೊಪ್ಪಳ, 08 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಕೊಪ್ಪಳ ಹಾಗೂ ಶ್ರೀ ಅನ್ನದಾನೇಶ್ವರ ಸರ್ಕಾರಿ ಪ್ರೌಢಶಾಲೆ, ಸಂಗನಾಳ ಇವರುಗಳ ಸಂಯುಕ್ತಾಶ್ರಯದಲ್ಲಿ “ವಿಶ್ವ ತಂಬಾಕು ರಹಿತ ದಿನಾಚರಣೆ” ಜಾಗೃತಿ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ವಿ.ಪಿ ಅವರು, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಹಾಗೂ ಸಾಂಕ್ರಾಮಿಕ ರೋಗಗಳು ಮತ್ತು ಅಸಾಂಕ್ರಾಮಿಕ ರೋಗಗಳ ಬಗ್ಗೆ ಸಂಪೂರ್ಣವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಸಂಗಪ್ಪ ಮಮಟಗೇರಿ ಅವರು ಕಾರ್ಯಕ್ರಮದ ಕುರಿತು ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಕೂಡ “ಆಕರ್ಷಣೆಯನ್ನು ಬಹಿರಂಗಪಡಿಸುವುದು-ನಿಕೋಟಿನ್ ಮತ್ತು ತಂಬಾಕು ವ್ಯಸನವನ್ನು ಎದುರಿಸುವುದು” ಎಂಬ ಘೋಷವಾಕ್ಯದೊಂದಿಗೆ ಮೇ 31 ರಂದು “ವಿಶ್ವ ತಂಬಾಕು ರಹಿತ ದಿನಾಚರಣೆ” ಕಾರ್ಯಕ್ರಮ ಆಚರಿಸಲಾಗುತ್ತಿದೆ.

ಡಬ್ಲ್ಯೂ.ಹೆಚ್.ಓ ಪ್ರಕಾರ ತಂಬಾಕು ಮತ್ತು ನಿಕೋಟಿನ್ ಉದ್ಯಮವು ಯುವಕರನ್ನು ಗುರಿಯಾಗಿಸಲು ಸುವಾಸನೆ, ವರ್ಣರಂಜಿತ ಪ್ಯಾಕೇಜಿಂಗ್ ಮತ್ತು ಸಾಮಾಜಿಕ ಮಾಧ್ಯಮವನ್ನು ಹೇಗೆ ಬಳಸುತ್ತದೆ ಎಂಬುವದನ್ನು ಬಹಿರಂಗಪಡಿಸುವುದು ಈ ಘೋಷವಾಕ್ಯದ ಉದ್ದೇಶವಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಕೊಟ್ಪಾ-2003ರ ಕಾಯ್ದೆಯ ಪ್ರಕಾರ, ದಂಡ ಮತ್ತು ಶಿಕ್ಷೆ ವಿಧಿಸಲಾಗುತ್ತದೆ ಮತ್ತು ಸೆಕ್ಷನ್: 6ಬಿ ಪ್ರಕಾರ ಶೈಕ್ಷಣಿಕ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ತಿಳಿದರು.

ದಿಹರೆಯದವರ ಆರೋಗ್ಯ ಸಮಸ್ಯೆಗಳು ಮತ್ತು ಪರಿಹಾರ ಕುರಿತು ತಿಳಿಸಿದರು ಹಾಗೂ ತಂಬಾಕು ಸೇವನೆಯಿಂದ ದೂರವಿದ್ದು ಯುವಕರು ಜಾಗೃತರಾಗಿ ತಮ್ಮ ವಿದ್ಯಾಭ್ಯಾಸ ಮತ್ತು ಉತ್ತಮ ಜೀವನದ ಕಡೆಗೆ ಹೆಚ್ಚು ಗಮನ ಹರಿಸಬೇಕು. ಎಲ್ಲಾ ವಿದ್ಯಾರ್ಥಿಗಳಿಗೆ ತಮ್ಮ ಮನೆ, ಶಾಲಾ, ಕಾಲೇಜುಗಳನ್ನು ತಂಬಾಕು ಮುಕ್ತ ಮಾಡುವುದರಲ್ಲಿ ತಮ್ಮದು ಪ್ರಮುಖ ಪಾತ್ರ ಇರುತ್ತದೆ. ಹಾಗಾಗಿ ನಮ್ಮ ದೇಶವನ್ನು ತಂಬಾಕು ಮುಕ್ತವನ್ನಾಗಿಸಲು ಸಾಧ್ಯ ಹಾಗೂ ವಿದ್ಯಾರ್ಥಿಗಳಿಗೆ “ಉತ್ತಮ ಜೀವನವನ್ನು ಆಯ್ದುಕೊಳ್ಳಿ ತಂಬಾಕನ್ನಲ್ಲ” ಎಂದು ಮತ್ತು ಒಳ್ಳೆಯ ಆರೋಗ್ಯಕರ ಅಭ್ಯಾಸಗಳನ್ನು ರೂಡಿಸಿಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡೋಣ ಎಂದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖೋಪಾದ್ಯಯರು ಹಾಗೂ ಎಲ್ಲಾ ಶಾಲೆಯ ಸಿಬ್ಬಂದಿ ವರ್ಗದವರು ಮತ್ತು ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande