
ಬೆಂಗಳೂರು, 08 ಜೂನ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ಉತ್ತರ ಮಹಾನಗರ ಪಾಲಿಕೆ ವತಿಯಿಂದ ಹುಣಸಮಾರನಹಳ್ಳಿಯಲ್ಲಿ ಪ್ರಾಣಿಗಳ ಜನನ ನಿಯಂತ್ರಣ (ಎಬಿಸಿ) ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.
ಕಾರ್ಯಕ್ರಮದ ಅಂಗವಾಗಿ 11 ಬೀದಿ ನಾಯಿಗಳನ್ನು ಸುರಕ್ಷಿತವಾಗಿ ಸೆರೆಹಿಡಿದು, ಅವುಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬೀಸ್ ವಿರೋಧಿ ಲಸಿಕೆ ನೀಡಲಾಯಿತು. ಬೀದಿನಾಯಿಗಳ ಸಂಖ್ಯೆಯನ್ನು ಮಾನವೀಯ ರೀತಿಯಲ್ಲಿ ನಿಯಂತ್ರಿಸುವುದು ಹಾಗೂ ರೇಬೀಸ್ ಹರಡುವಿಕೆಯನ್ನು ತಡೆಗಟ್ಟುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.
ನಗರ ಪ್ರದೇಶಗಳಲ್ಲಿ ಬೀದಿನಾಯಿಗಳ ನಿರ್ವಹಣೆ ಮತ್ತು ರೇಬೀಸ್ ತಡೆಗಟ್ಟುವಿಕೆಗೆ ಸರ್ಕಾರದ ನಿಯಮಾವಳಿಗಳಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ಉತ್ತರ ಮಹಾನಗರ ಪಾಲಿಕೆ ಪ್ರಾಣಿಗಳ ಜನನ ನಿಯಂತ್ರಣ ನಿಯಮಗಳ ಅನ್ವಯ ಬೀದಿನಾಯಿಗಳ ಜನಸಂಖ್ಯೆಯ ಪರಿಣಾಮಕಾರಿ ನಿರ್ವಹಣೆ, ಸಾರ್ವಜನಿಕ ಸುರಕ್ಷತೆ ಹಾಗೂ ಪ್ರಾಣಿ ಕಲ್ಯಾಣವನ್ನು ಖಚಿತಪಡಿಸುವ ನಿಟ್ಟಿನಲ್ಲಿ ತನ್ನ ಕಾರ್ಯಾಚರಣೆಗಳನ್ನು ಮುಂದುವರಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.