12 ವರ್ಷಗಳು ನಂಬಿಕೆ, ಅಭಿವೃದ್ಧಿ ಮತ್ತು ಜನಕಲ್ಯಾಣಕ್ಕೆ ಸಮರ್ಪಿತ : ಪ್ರಧಾನಿ ಮೋದಿ
ನವದೆಹಲಿ, 09 ಜೂನ್ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರದ 12 ವರ್ಷಗಳ ಆಡಳಿತ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದು, ಈ ಅವಧಿಯನ್ನು ನಂಬಿಕೆ, ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಮೀಸಲಾದ ಕಾಲವೆಂದು ಬಣ್ಣಿಸಿದ್ದಾರೆ. ಸಾಮಾಜಿ
Pm post


ನವದೆಹಲಿ, 09 ಜೂನ್ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರದ 12 ವರ್ಷಗಳ ಆಡಳಿತ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದು, ಈ ಅವಧಿಯನ್ನು ನಂಬಿಕೆ, ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಮೀಸಲಾದ ಕಾಲವೆಂದು ಬಣ್ಣಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ ಸಂದೇಶದಲ್ಲಿ ಪ್ರಧಾನಿ ಮೋದಿ, “ನಮ್ಮ ಸರ್ಕಾರದ ಕಳೆದ 12 ವರ್ಷಗಳು ನಂಬಿಕೆ, ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಸಮರ್ಪಿತವಾಗಿವೆ. 1.4 ಶತಕೋಟಿ ಭಾರತೀಯರ ಆಶೀರ್ವಾದ ಮತ್ತು ‘ರಾಷ್ಟ್ರ ಮೊದಲು’ ಎಂಬ ಮನೋಭಾವದೊಂದಿಗೆ ನಾವು ಕಾರ್ಯನಿರ್ವಹಿಸಿದ್ದೇವೆ” ಎಂದು ಹೇಳಿದ್ದಾರೆ.

ಯುವಜನತೆ, ಮಹಿಳೆಯರು ಹಾಗೂ ರೈತ ಸಮುದಾಯದ ಸಬಲೀಕರಣಕ್ಕಾಗಿ ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸಿದ್ದು, ಈ ನಿಟ್ಟಿನಲ್ಲಿ ಯಾವುದೇ ಅವಕಾಶವನ್ನು ಕೈಚೆಲ್ಲಿಲ್ಲ ಎಂದು ಅವರು ತಿಳಿಸಿದ್ದಾರೆ.

ದೇಶದ ಮೂಲಸೌಕರ್ಯ ಅಭಿವೃದ್ಧಿ, ಡಿಜಿಟಲ್ ಕ್ರಾಂತಿ, ಆರ್ಥಿಕ ಸುಧಾರಣೆಗಳು ಹಾಗೂ ಜನಪರ ಯೋಜನೆಗಳ ಮೂಲಕ ಭಾರತವು ಜಾಗತಿಕ ಮಟ್ಟದಲ್ಲಿ ಹೊಸ ಗುರುತು ಮತ್ತು ಮನ್ನಣೆಯನ್ನು ಗಳಿಸಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ.

“ಇಂದು ವಿಶ್ವದಾದ್ಯಂತ ಭಾರತಕ್ಕೆ ದೊರೆಯುತ್ತಿರುವ ಗೌರವ ಮತ್ತು ಮನ್ನಣೆ ನಮ್ಮ ಅವಿರತ ಪ್ರಯತ್ನಗಳ ಫಲವಾಗಿದೆ. ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಸಾಕಾರಗೊಳಿಸಲು ನಾವು ಸೇವೆ, ಸುಶಾಸನ ಮತ್ತು ಸಮೃದ್ಧಿಯ ಹಾದಿಯಲ್ಲಿ ಮುಂದುವರಿಯುತ್ತೇವೆ” ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande