
ಕೋಲಾರ, ೦೯ ಜೂನ್ (ಹಿ.ಸ) :
ಆ್ಯಂಕರ್ : ಹೃದಯಾಘಾತದಿಂದ ಮೃತಪಟ್ಟ ದೇವರಾಜ ಅರಸು ಅವರ ಮೊಮ್ಮಗ ಹಾಗೂ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಶ್ರದ್ದಾಂಜಲಿ ಅರ್ಪಿಸಿತು.
ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷಿö್ಮÃನಾರಾಯಣ, ಸರಳತೆ,ಸಜ್ಜನಿಕೆಗೆ ಹೆಸರಾಗಿದ್ದ ಸೂರಜ್ ಹೆಗ್ಡೆ ಅವರು, ಕಾಂಗ್ರೆಸ್ ಪಕ್ಷದ ನಿಷ್ಟಾವಂತ ನಾಯಕರಾಗಿದ್ದರು. ಕಾಂಗ್ರೆಸ್ ಎಸ್ಸಿಘಟಕದ ಜಿಲ್ಲಾಧ್ಯಕ್ಷ ಕೆ.ಜಯದೇವ್ ಮಾತನಾಡಿ, ಪಕ್ಷದ ವಿವಿಧ ಹುದ್ದೆಗಳಲ್ಲಿಕೆಲಸ ಮಾಡಿದ ಸೂರಜ್ ಅವರು, ಸೋನಿಯಾ ಗಾಂಧಿ ಕುಟುಂಬಕ್ಕೆ ಹತ್ತಿರವಾಗಿದ್ದರು, ಅವರ ನಡೆ,ಸರಳತೆ, ತಾಳ್ಮೆ ಕಾಂಗ್ರೆಸ್ ಕಾರ್ಯಕರ್ತರಿಗೆ ಆದರ್ಶವಾಗಿದೆ. ಮಾಜಿ ಮುಖ್ಯಮಂತ್ರಿಯಾಗಿ, ದೀನದಲಿತರ ನಾಯಕರಾಗಿ ರಾಜ್ಯದಲ್ಲಿ ಹೆಸರು ಮಾಡಿದ್ದ ಅರಸು ಅವರ ಮೊಮ್ಮಗ ಎನ್ನುವುದು ಮತ್ತೊಂದು ಹೆಮ್ಮೆಯಾಗಿತ್ತು ಎಂದ ಅವರು, ಅವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಅಪಾರ ನಷ್ಟವಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮಾತನಾಡಿ, ಸೂರಜ್ ಹೆಗ್ಡೆ ಅವರು ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ಆದರ್ಶವನ್ನು ಪಾಲಿಸಿಕೊಂಡು ಪಕ್ಷವನ್ನು ಮುನ್ನಡೆಸೋಣ ಎಂದು ಕಂಬನಿ ಮಿಡಿದರು.
ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರಾದ ಅಹಿಂದ ಒಬಿಸಿ ಮಂಜುನಾಥ್, ವೆಂಕಟಪತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಸರ್, ಸಂಪತ್ ಕುಮಾರ್,ನಾಗರಾಜ್ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್