ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
ಗದಗ, 09 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದ ಹಿರಿಯ ರಾಜಕಾರಣಿ ಹಾಗೂ ಸ್ವಚ್ಛ, ಪಾರದರ್ಶಕ ಆಡಳಿತಗಾರರಾಗಿ ಗುರುತಿಸಿಕೊಂಡಿರುವ ಎಚ್.ಕೆ. ಪಾಟೀಲ ಅವರಿಗೆ ತಕ್ಷಣ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಮುಖಂಡರು ಆಗ್ರಹಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗ
ಫೋಟೋ


ಗದಗ, 09 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದ ಹಿರಿಯ ರಾಜಕಾರಣಿ ಹಾಗೂ ಸ್ವಚ್ಛ, ಪಾರದರ್ಶಕ ಆಡಳಿತಗಾರರಾಗಿ ಗುರುತಿಸಿಕೊಂಡಿರುವ ಎಚ್.ಕೆ. ಪಾಟೀಲ ಅವರಿಗೆ ತಕ್ಷಣ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಮುಖಂಡರು ಆಗ್ರಹಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡ ಶಂಭು ಕಾಳೆ, ಎಚ್.ಕೆ. ಪಾಟೀಲ ಅವರು ದೀರ್ಘಕಾಲದ ರಾಜಕೀಯ ಅನುಭವ ಹೊಂದಿದ್ದು, ಜನಪರ ಆಡಳಿತದ ಮೂಲಕ ರಾಜ್ಯ ರಾಜಕಾರಣದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ ಎಂದು ಹೇಳಿದರು.

ಅವರು ಮಾತನಾಡಿ, “ಅವರ ಅನುಭವ ಮತ್ತು ಹಿರಿತನವನ್ನು ಪರಿಗಣಿಸಿ ಮೊದಲ ಹಂತದಲ್ಲಿಯೇ ಸಚಿವ ಸ್ಥಾನ ನೀಡಬೇಕಿತ್ತು. ಆದರೆ ಅವಕಾಶ ನೀಡದಿರುವುದು ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ತೀವ್ರ ನಿರಾಸೆ ಮೂಡಿಸಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪರಿಶಿಷ್ಟ ಜಾತಿ ಸಮುದಾಯವು ಸದಾ ಎಚ್.ಕೆ. ಪಾಟೀಲ ಅವರ ಪರ ನಿಂತಿದ್ದು, ಅವರಿಗೆ ನ್ಯಾಯ ದೊರೆಯಬೇಕು ಎಂದು ಅವರು ಒತ್ತಾಯಿಸಿದರು.

ಹೊನ್ನಪ್ಪ ಮಾತನಾಡಿ, ಮೊದಲ ಸಚಿವ ಸಂಪುಟ ರಚನೆಯಲ್ಲಿಯೇ ಎಚ್.ಕೆ. ಪಾಟೀಲ ಅವರ ಅನುಭವಕ್ಕೆ ತಕ್ಕ ಗೌರವ ಸಿಗಬೇಕಿತ್ತು ಎಂದು ಹೇಳಿದರು. ಅವರು ಮುಖ್ಯಮಂತ್ರಿ ಹುದ್ದೆಯ ಅಭ್ಯರ್ಥಿಗಳ ಪಟ್ಟಿಯಲ್ಲಿರುವ ನಾಯಕರು ಎಂದು ಸಹ ಅಭಿಪ್ರಾಯಪಟ್ಟರು.

ಗುರುರಾಜ ಸಂಕಣ್ಣವರ ಮಾತನಾಡಿ, ಈ ಸಂಬಂಧ ಜೂನ್ 16ರಂದು ನಗರದ ಕಾಟನ್ ಸೇಲ್ಸ್ ಸೊಸೈಟಿಯಲ್ಲಿ ಶಾಂತಿಯುತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಜೂನ್ 19ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಜುನಾಥ ಸಿಂಗಾಡಿ, ಮಲ್ಲಿಕಾರ್ಜುನ ಸಂಗಾಪುರ, ಯಲ್ಲಪ್ಪ ಒಂಟೆತ್ತಿನ, ಗಂಗಾಧರ ವಾಲಿಕಾರ ಹಾಗೂ ಗಣೇಶ ಕಟಗಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande