
ಬೆಂಗಳೂರು, 09 ಜೂನ್ (ಹಿ.ಸ.) :
ಆ್ಯಂಕರ್ : ಭಾರತೀಯ ಸಾಗರೋತ್ತರ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯೆ ಡಾ. ಆರತಿ ಕೃಷ್ಣ ಮತ್ತು ಉದ್ಯಮಿ ಡಾ. ರೋನಾಲ್ಡ್ ಕೋಲಾಸೋ ಅವರು ಮಂಗಳವಾರ ವಿಧಾನ ಸೌಧದಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ವಿವಿಧ ಸಮಕಾಲೀನ ವಿಷಯಗಳು ಹಾಗೂ ಸಂಘಟನಾ ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು. ಭೇಟಿ ವೇಳೆ ಪರಸ್ಪರ ಅಭಿಪ್ರಾಯ ವಿನಿಮಯವೂ ನಡೆಯಿತು.
ಹಿಂದೂಸ್ತಾನ್ ಸಮಾಚಾರ್ / Rakesh.M.B.