ಡಾ. ಬಾನಂದೂರು ಕೆಂಪಯ್ಯ ಅವರ ೭೫ನೇ ಜನ್ಮದಿನೋತ್ಸವದ ಕರಪತ್ರ ಬಿಡುಗಡೆ
ಡಾ. ಬಾನಂದೂರು ಕೆಂಪಯ್ಯ ಅವರ ೭೫ನೇ ಜನ್ಮದಿನೋತ್ಸವದ ಕರಪತ್ರ ಬಿಡುಗಡೆ
ಜಾನಪದ ಗಾಯಕ ಡಾ.ಬಾನಂದೂರು ಕೆಂಪಯ್ಯನವರ ಹುಟ್ಟು ಹಬ್ಬ ಆದರಣೆ ಕರಪತ್ರ ಕೋಲಾರದಲ್ಲಿ ಬಿಡುಗಡೆ ಮಾಡಲಾಯಿತು


ಕೋಲಾರ, ೦೯ ಜೂನ್ (ಹಿ.ಸ) :

ಆ್ಯಂಕರ್ : ಅಂತಾರಾಷ್ಟ್ರೀಯ ಖ್ಯಾತಿಯ ಜಾನಪದ ಗಾಯಕ, ಆಕಾಶವಾಣಿ ಮತ್ತು ದೂರದರ್ಶನದ ನಿವೃತ್ತ ನಿರ್ದೇಶಕ ಹಾಗೂ ಕರ್ನಾಟಕ ಜಾನಪದ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಡಾ. ಬಾನಂದೂರು ಕೆಂಪಯ್ಯ ಅವರ ೭೫ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದ ಪ್ರಯುಕ್ತ ಕೋಲಾರದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮುಂಬರುವ ಜೂನ್ ೧೪ರ ಭಾನುವಾರ ಬೆಳಿಗ್ಗೆ ೧೦:೩೦ ಕ್ಕೆ ನಗರದ ಸುವರ್ಣ ಕನ್ನಡ ಭವನದಲ್ಲಿ ಮೂಡಲ ಸೀಮೆಯ ಜಾನಪದ ಗಾಯಕರಿಂದ ಗಂಧರ್ವ ಜಾನಪದ ಗೀತಗಾಯನ ಗುಚ್ಛ ಕಾರ್ಯಕ್ರಮವು ಜರುಗಲಿದೆ ಎಂದು ಸಂಘಟಕ ಬಿ. ವೆಂಕಟಾಚಲಪತಿ ಅವರು ತಿಳಿಸಿದ್ದಾರೆ.

ಈ ಸಾಂಸ್ಕೃತಿಕ ಉತ್ಸವವನ್ನು ಕೋಲಾರದ ‘ಈನೆಲ ಈಜಲ ಕಲೆ ಮತ್ತು ಸಾಂಸ್ಕೃತಿಕ ಸಂಸ್ಥೆ’, ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಒಕ್ಕೂಟ ಹಾಗೂ ಕೋಲಾರ ಜಿಲ್ಲೆಯ ಎಲ್ಲಾ ಕಲಾವಿದರು, ರೈತ, ಕನ್ನಡ, ಮಹಿಳಾ ಮತ್ತು ಪ್ರಗತಿಪರ ಒಕ್ಕೂಟಗಳ ವತಿಯಿಂದ ಜಂಟಿಯಾಗಿ ಆಯೋಜಿಸಲಾಗುತ್ತಿದೆ.

ಡಾ. ಬಾನಂದೂರು ಕೆಂಪಯ್ಯನವರು ಜಾನಪದ ಕ್ಷೇತ್ರಕ್ಕೆ ಸಲ್ಲಿಸಿರುವ ಅನುಪಮ ಸೇವೆಯನ್ನು ಪರಿಗಣಿಸಿ ಅವರಿಗೆ ಕರ್ನಾಟಕ ಸರ್ಕಾರದ ಅತ್ಯುನ್ನತ ರಾಜ್ಯೋತ್ಸವ ಪ್ರಶಸ್ತಿ, ಡಾ. ಬಿ. ಆರ್. ಅಂಬೇಡ್ಕರ್ ರಾಜ್ಯ ಪ್ರಶಸ್ತಿ ಹಾಗೂ ಬೆಂಗಳೂರಿನ ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅವರ ೭೫ನೇ ಜನ್ಮದಿನದ ಅಂಗವಾಗಿ ಅವರ ಸುದೀರ್ಘ ಕಲಾ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಈ ವಿಶಿಷ್ಟ ಗಾಯನ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.

ಕಲೆ ಮತ್ತು ಸಾಂಸ್ಕೃತಿಕ ಹಿನ್ನೆಲೆಯುಳ್ಳ ಕಾರ್ಯಕ್ರಮವಾಗಿದ್ದು, ಕೋಲಾರದ ಜನತೆ ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ಈ ಸಂದರ್ಭದಲ್ಲಿ ಬೆಳಗಾನಹಳ್ಳಿ ಮುನಿವೆಂಕಟಪ್ಪ, ದಲಿತ ಮುಖಂಡರಾದ ಚಂದ್ರಮೌಳಿ, ಟಿ.ವಿಜಯಕುಮಾರ್, ಶ್ರೀನಿವಾಸ್, ಪಂಡಿತ್ ಮುನಿವೆಂಕಟಪ್ಪ, ಗೋವಿಂದ್ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande