ಮೋದಿ ನೇತೃತ್ವದ 12 ವರ್ಷಗಳಲ್ಲಿ ದೇಶದಲ್ಲಿ ಐತಿಹಾಸಿಕ ಬದಲಾವಣೆ : ಅಮಿತ್ ಶಾ
ನವದೆಹಲಿ, 09 ಜೂನ್ (ಹಿ.ಸ.) : ಆ್ಯಂಕರ್ : ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ 12 ವರ್ಷಗಳ ಆಡಳಿತವನ್ನು ಸ್ಮರಿಸಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ವಿಶೇಷ ಸಂದೇಶ ಹಂಚಿಕೊಂಡಿದ್ದಾರೆ. ಸತತ ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸ
Amit sha  post


ನವದೆಹಲಿ, 09 ಜೂನ್ (ಹಿ.ಸ.) :

ಆ್ಯಂಕರ್ : ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ 12 ವರ್ಷಗಳ ಆಡಳಿತವನ್ನು ಸ್ಮರಿಸಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ವಿಶೇಷ ಸಂದೇಶ ಹಂಚಿಕೊಂಡಿದ್ದಾರೆ.

ಸತತ ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿರುವ ಅಮಿತ್ ಶಾ, ಕಳೆದ 12 ವರ್ಷಗಳಲ್ಲಿ ಭಾರತವು ಬಡತನ ನಿರ್ಮೂಲನೆ ಹಾಗೂ ಅಭೂತಪೂರ್ವ ಅಭಿವೃದ್ಧಿಯನ್ನು ಒಂದೇ ಸಮಯದಲ್ಲಿ ಸಾಧಿಸಿದೆ ಎಂದು ಹೇಳಿದ್ದಾರೆ.

ಉಚಿತ ಪಡಿತರ ಯೋಜನೆಯ ಮೂಲಕ 80 ಕೋಟಿಗೂ ಹೆಚ್ಚು ಜನರಿಗೆ ಆಹಾರ ಭದ್ರತೆ ಒದಗಿಸಲಾಗಿದೆ. ದೇಶದಾದ್ಯಂತ 90 ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳನ್ನು ಆರಂಭಿಸಲಾಗಿದ್ದು, 140ಕ್ಕೂ ಹೆಚ್ಚು ವಂದೇ ಭಾರತ್ ರೈಲುಗಳನ್ನು ಸಂಚಾರಕ್ಕೆ ಬಿಡಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಇದಲ್ಲದೆ, 4 ಕೋಟಿ ಬಡ ಕುಟುಂಬಗಳಿಗೆ ಶಾಶ್ವತ ಮನೆಗಳನ್ನು ನಿರ್ಮಿಸಿಕೊಡಲಾಗಿದೆ. 1.45 ಲಕ್ಷ ಕಿಲೋಮೀಟರ್ಗಿಂತ ಹೆಚ್ಚು ರಸ್ತೆಗಳನ್ನು ನಿರ್ಮಿಸಲಾಗಿದ್ದು, ಸುಮಾರು 3,000 ಕಿಲೋಮೀಟರ್ ಉದ್ದದ ಆಧುನಿಕ ಎಕ್ಸ್ಪ್ರೆಸ್ವೇಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ಆರೋಗ್ಯ ಕ್ಷೇತ್ರದಲ್ಲಿ 50 ಕೋಟಿ ಜನರಿಗೆ ₹5 ಲಕ್ಷದವರೆಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲಾಗಿದೆ. 10 ಕೋಟಿ ಕುಟುಂಬಗಳಿಗೆ ಅಡುಗೆ ಅನಿಲ ಸಂಪರ್ಕ ನೀಡಲಾಗಿದ್ದು, ಭಾರತವು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಳೆದ 12 ವರ್ಷಗಳಲ್ಲಿ ಒಂದೇ ಒಂದು ದಿನ ರಜೆ ತೆಗೆದುಕೊಳ್ಳದೆ ರಾಷ್ಟ್ರಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ನಾಯಕತ್ವದ ಉದ್ದೇಶ ಸ್ಪಷ್ಟವಾಗಿದ್ದಾಗ, ಗುರಿ ರಾಷ್ಟ್ರಹಿತವಾಗಿದ್ದಾಗ ಹಾಗೂ ಸಮರ್ಪಣೆ ಸಂಪೂರ್ಣವಾಗಿದ್ದಾಗ ಮಾತ್ರ ಇಂತಹ ಪರಿವರ್ತನೆ ಸಾಧ್ಯವಾಗುತ್ತದೆ ಎಂದು ಅವರು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.

ಮೋದಿ ಅವರ ದೃಢ ನಾಯಕತ್ವ ಮತ್ತು ಅಹರ್ನಿಶಿ ಪರಿಶ್ರಮವೇ ದೇಶದ ಅಭಿವೃದ್ಧಿಯ ಪ್ರಮುಖ ಆಧಾರವಾಗಿದೆ ಎಂದು ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande