ಬಡತನ ನಿರ್ಮೂಲನೆ ; ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ
ನವದೆಹಲಿ, 09 ಜೂನ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಮೋದಿ ಸರ್ಕಾರದ 12 ವರ್ಷಗಳ ಆಡಳಿತದಲ್ಲಿ ಬಡತನ ಕಡಿಮೆ ಮಾಡುವ ಬಗ್ಗೆ ದೊಡ್ಡ ಮಟ್ಟದ ಪ್ರಚಾರ ಮಾಡಲಾಗುತ್ತ
Kharge file photo


ನವದೆಹಲಿ, 09 ಜೂನ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.

ಮೋದಿ ಸರ್ಕಾರದ 12 ವರ್ಷಗಳ ಆಡಳಿತದಲ್ಲಿ ಬಡತನ ಕಡಿಮೆ ಮಾಡುವ ಬಗ್ಗೆ ದೊಡ್ಡ ಮಟ್ಟದ ಪ್ರಚಾರ ಮಾಡಲಾಗುತ್ತಿದೆ. ಆದರೆ ವಾಸ್ತವದಲ್ಲಿ ಬಡವರ ಹಕ್ಕುಗಳು ಮತ್ತು ಸೌಲಭ್ಯಗಳನ್ನು ಕಡಿತಗೊಳಿಸಲಾಗುತ್ತಿದೆ ಎಂದು ಖರ್ಗೆ ಆರೋಪಿಸಿದ್ದಾರೆ.

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿಯಲ್ಲಿ ದೊರೆಯುತ್ತಿದ್ದ ಉದ್ಯೋಗದ ಹಕ್ಕನ್ನು ಮೊದಲು ದುರ್ಬಲಗೊಳಿಸಲಾಯಿತು. ಈಗ ಬಡವರ ಆಹಾರ ಮತ್ತು ಜೀವನೋಪಾಯಕ್ಕೂ ಧಕ್ಕೆಯುಂಟಾಗುತ್ತಿದೆ ಎಂದು ಅವರು ಹೇಳಿದ್ದಾರೆ.

2016ರಲ್ಲಿ ಆರಂಭಿಸಲಾದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಮಹಿಳೆಯರು ಸೌದೆ ಒಲೆಯ ಹೊಗೆಯಿಂದ ಮುಕ್ತರಾಗಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ಯೋಜನೆಯ ಆರಂಭಿಕ ಹಂತದಲ್ಲಿ ವರ್ಷಕ್ಕೆ 12 ಸಬ್ಸಿಡಿ ಸಿಲಿಂಡರ್ಗಳ ಸೌಲಭ್ಯವನ್ನು ಘೋಷಿಸಲಾಗಿತ್ತು ಎಂದು ಖರ್ಗೆ ಉಲ್ಲೇಖಿಸಿದ್ದಾರೆ.

ಆದರೆ ಕಳೆದ ವರ್ಷ ಸಬ್ಸಿಡಿ ಸಿಲಿಂಡರ್ಗಳ ಸಂಖ್ಯೆಯನ್ನು 12ರಿಂದ 9ಕ್ಕೆ ಇಳಿಸಲಾಗಿತ್ತು. ಇದೀಗ ಅದನ್ನು 9ರಿಂದ ಕೇವಲ 4ಕ್ಕೆ ಇಳಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಹೀಗಾಗಿ ನೀಡಿದ್ದ ಭರವಸೆ ಮತ್ತು ವಾಸ್ತವ ಅನುಷ್ಠಾನದ ನಡುವೆ ದೊಡ್ಡ ಅಂತರವಿದೆ ಎಂದು ಹೇಳಿದ್ದಾರೆ.

ಎಲ್ಪಿಜಿ ದರಗಳನ್ನು ಪದೇ ಪದೇ ಹೆಚ್ಚಿಸಿರುವ ಪರಿಣಾಮ ಲಕ್ಷಾಂತರ ಕುಟುಂಬಗಳು ಸಿಲಿಂಡರ್ ಮರುಪೂರಣ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪರಿಣಾಮವಾಗಿ ಅನೇಕ ಮಹಿಳೆಯರು ಮತ್ತೆ ಸಾಂಪ್ರದಾಯಿಕ ಒಲೆಗಳನ್ನು ಬಳಸುವ ಪರಿಸ್ಥಿತಿಗೆ ತಳ್ಳಲ್ಪಡುತ್ತಿದ್ದಾರೆ ಎಂದು ಖರ್ಗೆ ಆರೋಪಿಸಿದ್ದಾರೆ.

ಬಡವರು ಮತ್ತು ಮಹಿಳೆಯರ ಸಂಕಷ್ಟಗಳ ಬಗ್ಗೆ ಕಾಳಜಿ ತೋರಿಸುವಂತೆ ಕಾಣಿಸುತ್ತಿದ್ದರೂ, ವಾಸ್ತವದಲ್ಲಿ ಸರ್ಕಾರ ಅವರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲವಾಗಿದೆ ಎಂದು ಖರ್ಗೆ ತಮ್ಮ ಎಕ್ಸ್ ಸಂದೇಶದಲ್ಲಿ ಟೀಕಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande