ಆತ್ಮನಿರ್ಭರ ಭಾರತದತ್ತ ದೇಶ ಮುನ್ನಡೆ : ಪ್ರಧಾನಿ ಮೋದಿ
ನವದೆಹಲಿ, 09 ಜೂನ್ (ಹಿ.ಸ.) : ಆ್ಯಂಕರ್ : ರಾಷ್ಟ್ರ ನಿರ್ಮಾಣಕ್ಕೆ ಸಮರ್ಪಣೆ ಮತ್ತು ಸೇವಾ ಮನೋಭಾವವೇ ನಮ್ಮ ಅಮೂಲ್ಯ ಬಂಡವಾಳವಾಗಿದ್ದು, ಕಳೆದ 12 ವರ್ಷಗಳಲ್ಲಿ ''ಸಬ್ ಕಾ ಸಾಥ್, ಸಬ್ ಕಾ ವಿಕಾಸ್'' ಎಂಬ ಧ್ಯೇಯದೊಂದಿಗೆ ಕೈಗೊಂಡ ನಿರಂತರ ಪ್ರಯತ್ನಗಳ ಫಲವಾಗಿ ಭಾರತ ಇಂದು ಬಲಿಷ್ಠ ಮತ್ತು ಆತ್ಮನಿರ್ಭರ
Pm


ನವದೆಹಲಿ, 09 ಜೂನ್ (ಹಿ.ಸ.) :

ಆ್ಯಂಕರ್ : ರಾಷ್ಟ್ರ ನಿರ್ಮಾಣಕ್ಕೆ ಸಮರ್ಪಣೆ ಮತ್ತು ಸೇವಾ ಮನೋಭಾವವೇ ನಮ್ಮ ಅಮೂಲ್ಯ ಬಂಡವಾಳವಾಗಿದ್ದು, ಕಳೆದ 12 ವರ್ಷಗಳಲ್ಲಿ 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಎಂಬ ಧ್ಯೇಯದೊಂದಿಗೆ ಕೈಗೊಂಡ ನಿರಂತರ ಪ್ರಯತ್ನಗಳ ಫಲವಾಗಿ ಭಾರತ ಇಂದು ಬಲಿಷ್ಠ ಮತ್ತು ಆತ್ಮನಿರ್ಭರ ರಾಷ್ಟ್ರದತ್ತ ಮುನ್ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಂಗಳವಾರ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ದೇಶದ ಅಭಿವೃದ್ಧಿ ಮತ್ತು ಜನಕಲ್ಯಾಣಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಉಲ್ಲೇಖಿಸಿದರು. ರಾಷ್ಟ್ರ ನಿರ್ಮಾಣದಲ್ಲಿ ಸೇವಾ ಮನೋಭಾವ ಮತ್ತು ಸಮರ್ಪಣೆಯ ಮಹತ್ವವನ್ನು ಅವರು ಈ ಸಂದರ್ಭದಲ್ಲಿ ಪ್ರತಿಪಾದಿಸಿದರು.

ತಮ್ಮ ಸಂದೇಶದಲ್ಲಿ ಪ್ರಧಾನಿ ಮೋದಿ ಅವರು ಒಂದು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದು, ಅದರಲ್ಲಿ,

“ಆರ್ಯಕರ್ಮಾಣಿ ರಾಜ್ಯಂತೇ ಭೂತಿಕರ್ಮಾಣಿ ಕುರ್ವತೇ. ಹಿತಂ ಚ ನಾಭ್ಯಾಸೂಯಂತಿ ಸ ವಾ ಪಂಡಿತ್ ಉಚ್ಯತೇ.”

ಎಂದು ಉಲ್ಲೇಖಿಸಿದ್ದಾರೆ.

ಈ ಸುಭಾಷಿತದ ಅರ್ಥವನ್ನು ವಿವರಿಸಿದ ಅವರು, ಸದಾ ಸತ್ಕಾರ್ಯಗಳಲ್ಲಿ ತೊಡಗಿರುವ, ಸಮಾಜದ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಶ್ರಮಿಸುವ, ಇತರರ ಹಿತಕರ ಮಾತುಗಳು ಹಾಗೂ ಕಾರ್ಯಗಳನ್ನು ಗೌರವಿಸುವ ಮತ್ತು ಯಾರ ಮೇಲೂ ದ್ವೇಷಭಾವನೆ ಹೊಂದದ ವ್ಯಕ್ತಿಯೇ ನಿಜವಾದ ಪಂಡಿತ ಅಥವಾ ಜ್ಞಾನಿ ಎಂದು ಹೇಳಿದ್ದಾರೆ.

ಕಳೆದ 12 ವರ್ಷಗಳಲ್ಲಿ ಸರ್ಕಾರವು ಎಲ್ಲ ವರ್ಗಗಳ ಜನರ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳ ಮೂಲಕ ದೇಶವನ್ನು ಸ್ವಾವಲಂಬನೆ ಮತ್ತು ಸಮಗ್ರ ಅಭಿವೃದ್ಧಿಯ ದಿಕ್ಕಿನಲ್ಲಿ ಮುನ್ನಡೆಸಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬ ನಾಗರಿಕನ ಸಹಭಾಗಿತ್ವ ಅಗತ್ಯವಾಗಿದ್ದು, ಇದೇ ಮನೋಭಾವದೊಂದಿಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಗುರಿಯತ್ತ ಸಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande