ಹೂವಿನ ಹಡಗಲಿ ವಾರ್ಡನ್ ಅಮಾನತು
ಹೂವಿನಹಡಗಲಿ, 09 ಜೂನ್ (ಹಿ.ಸ.) : ಆ್ಯಂಕರ್ : ಹೂವಿನ ಹಡಗಲಿ ಪಟ್ಟಣದ ಸರ್ಕಾರಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಮಂಜುಳಾ ತಂಬ್ರಹಳ್ಳಿ ಅವರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೊಂಗ್ಜಾಯ್ ಮಹ್ಮದ್ ಅಲಿ
ಹೂವಿನ ಹಡಗಲಿ ವಾರ್ಡನ್ ಅಮಾನತು


ಹೂವಿನಹಡಗಲಿ, 09 ಜೂನ್ (ಹಿ.ಸ.) :

ಆ್ಯಂಕರ್ : ಹೂವಿನ ಹಡಗಲಿ ಪಟ್ಟಣದ ಸರ್ಕಾರಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಮಂಜುಳಾ ತಂಬ್ರಹಳ್ಳಿ ಅವರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೊಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ನಿಲಯ ಪಾಲಕಿ ಮಂಜುಳ ತಂಬ್ರಹಳ್ಳಿ ವಿದ್ಯಾರ್ಥಿ ನಿಲಯದಿಂದ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡಲಾಗುತ್ತಿದೆ ಎಂದು ಕೆ.ಆರ್.ಎಸ್. ಪಕ್ಷದ ಪದಾಧಿಕಾರಿಗಳು ನೀಡಿದ ಮೌಖಿಕ ದೂರಿನ ಮೇರೆಗೆ ಹಡಗಲಿ ತಾಲೂಕು ಪಂಚಾಯತಿ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿಗಳು ಜಂಟಿಯಾಗಿ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಈ ವೇಳೆ ಬೇರೆಡೆಗೆ ಅಕ್ರಮವಾಗಿ ಸಾಗಿಸಲಾಗಿದ್ದ ಅಕ್ಕಿ ದಾಸ್ತಾನನ್ನು ಪುನಃ ವಸತಿ ನಿಲಯಕ್ಕೆ ತಂದಿಟ್ಟಿರುವುದು ಕಂಡು ಬಂದಿದೆ.

ನಿಲಯಕ್ಕೆ ನೀಡಲಾಗಿದ್ದ ವಾಷಿಂಗ್ ಮೆಷಿನ್ ಅನ್ನು ನಿಯಮಾನುಸಾರ ವಿಲೇವಾರಿ ಮಾಡದೆ ಗುಜರಿಗೆ ಮಾರಾಟ ಮಾಡಲಾಗಿದೆ. ನಿಲಯದಲ್ಲಿದ್ದ ಗ್ಯಾಸ್ ಸಿಲಿಂಡರ್ ಸಹ ಕಳ್ಳತನವಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಈ ಎಲ್ಲಾ ಲೋಪಗಳು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಸಿವಿಲ್ ಸೇವಾ (ನಡತೆ) ನಿಯಮಗಳು 1966ರ ನಿಯಮ-3ನ್ನು ಉಲ್ಲಂಘಿಸಿದ ಆರೋಪದ ಮೇಲೆ ವಾರ್ಡನ್ ಮಂಜುಳ ತಂಬ್ರಹಳ್ಳಿ ಅವರನ್ನು ಅಮಾನತುಗೊಳಿಸಿ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಶಿಸ್ತು ಪ್ರಾಧಿಕಾರ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ನೊಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande