ರಾಜ್ಯದಲ್ಲಿ ಇಂದು ವ್ಯಾಪಕ ಮಳೆ ಸಾಧ್ಯತೆ
ನಾನಾ
Alert


ಬೆಂಗಳೂರು, 09 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದಾದ್ಯಂತ ಇಂದು ಹಲವೆಡೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಮುನ್ಸೂಚನೆಯ ಪ್ರಕಾರ, ಕರ್ನಾಟಕದ ನಾನಾ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ ಕೆಲವೆಡೆ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದ್ದು, ಕೆಲ ಪ್ರದೇಶಗಳಲ್ಲಿ ಅತ್ಯಧಿಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಗುಡುಗು ಮತ್ತು ಸಿಡಿಲಿನ ಚಟುವಟಿಕೆ ಹೆಚ್ಚಿರುವ ಕಾರಣ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಮತ್ತು ರೈತರು ಎಚ್ಚರಿಕೆಯಿಂದ ಇರಬೇಕಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮುಂದಿನ ಕೆಲ ದಿನಗಳವರೆಗೂ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ. ಸಾರ್ವಜನಿಕರು ಸ್ಥಳೀಯ ಹವಾಮಾನ ಇಲಾಖೆಯ ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande