ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಪ್ರವೇಶ
ಕೊಪ್ಪಳ, 01 ಜುಲೈ (ಹಿ.ಸ.): ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸ್ನಾತಕ ಮತ್ತು ಸ್ನಾತಕೋತ್ತರ) ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ 2026–27ನೇ ಶೈಕ್ಷಣಿಕ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳ
ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಪ್ರವೇಶ


ಕೊಪ್ಪಳ, 01 ಜುಲೈ (ಹಿ.ಸ.):

ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸ್ನಾತಕ ಮತ್ತು ಸ್ನಾತಕೋತ್ತರ) ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ 2026–27ನೇ ಶೈಕ್ಷಣಿಕ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರವರ್ಗ–1, 2ಎ, 2ಬಿ, 3ಎ, 3ಬಿ ಹಾಗೂ ಇತರ ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಪೋಷಕರ ವಾರ್ಷಿಕ ಆದಾಯ ಮಿತಿಯು ಪ್ರವರ್ಗ–1, ಎಸ್.ಸಿ. ಮತ್ತು ಎಸ್.ಟಿ. ವಿದ್ಯಾರ್ಥಿಗಳಿಗೆ ರೂ. 2.50 ಲಕ್ಷ ಹಾಗೂ ಪ್ರವರ್ಗ–2ಎ, 2ಬಿ, 3ಎ ಮತ್ತು 3ಬಿ ವಿದ್ಯಾರ್ಥಿಗಳಿಗೆ ರೂ. 1 ಲಕ್ಷ ನಿಗದಿಯಾಗಿದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಪೋರ್ಟಲ್ https://shp.karnataka.gov.in/bcwd ನಲ್ಲಿ ನೋಂದಣಿ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬೇಕು.

ವಿದ್ಯಾರ್ಥಿನಿಲಯಗಳ ವಿವರ, ಅರ್ಹತಾ ಮಾನದಂಡ, ದಾಖಲೆಗಳು ಹಾಗೂ ಇತರ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ https://bcwd.karnataka.gov.in/ ಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಇ-ಮೇಲ್ bcwdhelpline@gmail.com ಮೂಲಕ ಅಥವಾ ಇಲಾಖಾ ಜಿಲ್ಲಾ, ತಾಲೂಕು ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಅನ್ನು ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande