
ಕೊಪ್ಪಳ, 01 ಜುಲೈ (ಹಿ.ಸ.):
ಆ್ಯಂಕರ್ : ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು ಸಿದ್ಧಾರ್ಥನಗರ ಮೈಸೂರು ವತಿಯಿಂದ 2026-27 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿ.ವಿ.ಎ. ಸ್ನಾತಕ ಪದವಿ ತರಗತಿಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮೈಸೂರು ವಿಶ್ವವಿದ್ಯಾನಿಲಯದ ಪ್ರವೇಶಾತಿ ಅಧಿಸೂಚನೆ ಅನ್ವಯ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿ.ವಿ.ಎ. ದೃಶ್ಯ ಕಲೆಯಲ್ಲಿ ನಾಲ್ಕು ವರ್ಷದ ಎಂಟು ಸೆಮಿಸ್ಟರ್ ಗಳ ರಾಜ್ಯ ಶಿಕ್ಷಣ ಪದ್ಧತಿ' (ಸ್ಟೇಟ್ ಎಜುಕೇಶನ್ ಪಾಲಿಸಿ) ಯಂತೆ ಸ್ನಾತಕ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ. ಅಥವಾ ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ https://uucms.karnataka.gov.in ಮೂಲಕ ಜುಲೈ 4 ವರೆಗೆ (ದಂಡ ಶುಲ್ಕದೊಂದಿಗೆ) ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಾಲಾಗಿದ್ದು, ಈ ಪದವಿಯಲ್ಲಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋಧ್ಯಮ ವಿಷಯಗಳಲ್ಲಿ ವಿಶೇಷ ಅಧ್ಯಯನ ಒಳಗೊಂಡಿರುತ್ತದೆ.
ಪ್ರವೇಶಾತಿ ಕೋರಿ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ಜುಲೈ 6 ರಂದು ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯದಲ್ಲಿ ಕಾರ್ಯಾಲಯದ ದೂರವಾಣಿ ಸಂಖ್ಯೆ 0821-2438931 ಯನ್ನು ಸಂಪರ್ಕಿಸಬಹುದು ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜಿನ ಡೀನ್ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್