ಹೊಸಳ್ಳಿ ಗ್ರಾಮದಲ್ಲಿ ಎಸ್ಐಆರ್ ಕುರಿತು ಜಾಗೃತಿ ಕಾರ್ಯಕ್ರಮ.
ಗದಗ, 01 ಜುಲೈ (ಹಿ.ಸ.): ಆ್ಯಂಕರ್: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಪ್ರಕ್ರಿಯೆಯಾಗಿದ್ದು, ಸಾರ್ವಜನಿಕರು ಮನೆ-ಮನೆಗೆ ಭೇಟಿ ನೀಡುವ ಬೂತ್ ಮಟ್ಟದ
ಫೋಟೋ


ಗದಗ, 01 ಜುಲೈ (ಹಿ.ಸ.):

ಆ್ಯಂಕರ್: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಪ್ರಕ್ರಿಯೆಯಾಗಿದ್ದು, ಸಾರ್ವಜನಿಕರು ಮನೆ-ಮನೆಗೆ ಭೇಟಿ ನೀಡುವ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್ಒ) ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ನೀಡಿ ಸಂಪೂರ್ಣ ಸಹಕಾರ ನೀಡಬೇಕು ಎಂದು ರೋಣ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ ಕಂದಕೂರ ಹೇಳಿದರು.

ಗದಗ ಜಿಲ್ಲೆ ರೋಣ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ತಹಸೀಲ್ದಾರ ಹಾಗೂ ತಾಲೂಕ ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಎಸ್ಐಆರ್ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಸೇರ್ಪಡೆಯಾಗುವುದು ಮತ್ತು ಅನರ್ಹ ಹೆಸರುಗಳನ್ನು ತೆಗೆದುಹಾಕುವುದು ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆಗೆ ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.

ಭಾರತ ಚುನಾವಣಾ ಆಯೋಗವು ಜುಲೈ 1ರಿಂದ 29 ರವರೆಗೆ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಕೈಗೊಂಡಿದ್ದು, ಈ ಅವಧಿಯಲ್ಲಿ ಬಿಎಲ್ಒಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ಸಾರ್ವಜನಿಕರು ಯಾವುದೇ ಅನುಮಾನ ಅಥವಾ ನಿರ್ಲಕ್ಷ್ಯ ತೋರದೆ ಅಧಿಕಾರಿಗಳಿಗೆ ಅಗತ್ಯ ಮಾಹಿತಿ ಒದಗಿಸಬೇಕು. ಹಿಂದಿನ ಮತದಾರರ ಪಟ್ಟಿಯ ಆಧಾರದ ಮೇಲೆ ಎನ್ಯೂಮರೇಶನ್ ಫಾರ್ಮ್ ಭರ್ತಿ ಮಾಡಿ, ಚುನಾವಣಾ ಆಯೋಗ ಸೂಚಿಸಿರುವ ದಾಖಲೆಗಳನ್ನು ಲಗತ್ತಿಸಿ ಬಿಎಲ್ಒಗಳಿಗೆ ಸಲ್ಲಿಸಬೇಕು ಎಂದು ಹೇಳಿದರು.

ರೋಣ ತಾಲೂಕಿನ ತಸಿಲ್ಧಾರರಾದ ಶ್ರೀ ನಾಗರಾಜ ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವು ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಇರುವಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿರುವುದರಿಂದ ಸಾರ್ವಜನಿಕರು ಅವರಿಗೆ ಅಗತ್ಯ ಸಹಕಾರ ನೀಡಬೇಕು. ಚುನಾವಣಾ ಆಯೋಗದ ಈ ಮಹತ್ವದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಗ್ರಾಮಸ್ಥರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಜಾಗೃತಿ ಕಾರ್ಯಕ್ರಮದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಎನ್ಯೂಮರೇಶನ್ ಫಾರ್ಮ್ ಭರ್ತಿ ಮಾಡುವ ವಿಧಾನ, ಅಗತ್ಯ ದಾಖಲೆಗಳು, ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದುಹಾಕುವ ಪ್ರಕ್ರಿಯೆಗಳ ಕುರಿತು ಅಧಿಕಾರಿಗಳು ವಿವರಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಬೂತ್ ಮಟ್ಟದ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande