ಒಳ ಮೀಸಲಾತಿ ಹಂಚಿಕೆ ವಿರುದ್ಧ ಬಂಜಾರ ಸಮಾಜದ ಆಕ್ರೋಶ
ಬೀದರ್, 01 ಜುಲೈ (ಹಿ.ಸ.): ಆ್ಯಂಕರ್: ರಾಜ್ಯ ಸರ್ಕಾರದ ಒಳ ಮೀಸಲಾತಿ ಹಂಚಿಕೆ ಕ್ರಮವನ್ನು ವಿರೋಧಿಸಿ ದಿಕ್ಸೂಚಿ ಬಂಜಾರ ಕರ್ನಾಟಕ ಸಂಘಟನೆ ವತಿಯಿಂದ ಬೀದರ್‌ನಲ್ಲಿ ನಮ್ಮ ಮೀಸಲಾತಿ ನಮ್ಮ ಹಕ್ಕು ಎಂಬ ಘೋಷಣೆಯಡಿ ಜನಾಂದೋಲನ ಯಾತ್ರೆ ಹಾಗೂ ಚಿಂತನಾ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಮುಖಂಡರು, ಒಳ ಮ
ಬಂಜಾರ ಸಮುದಾಯದ ಸಭೆ


ಬೀದರ್, 01 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯ ಸರ್ಕಾರದ ಒಳ ಮೀಸಲಾತಿ ಹಂಚಿಕೆ ಕ್ರಮವನ್ನು ವಿರೋಧಿಸಿ ದಿಕ್ಸೂಚಿ ಬಂಜಾರ ಕರ್ನಾಟಕ ಸಂಘಟನೆ ವತಿಯಿಂದ ಬೀದರ್‌ನಲ್ಲಿ ನಮ್ಮ ಮೀಸಲಾತಿ ನಮ್ಮ ಹಕ್ಕು ಎಂಬ ಘೋಷಣೆಯಡಿ ಜನಾಂದೋಲನ ಯಾತ್ರೆ ಹಾಗೂ ಚಿಂತನಾ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಮುಖಂಡರು, ಒಳ ಮೀಸಲಾತಿಯ ಅವೈಜ್ಞಾನಿಕ ಹಂಚಿಕೆಯ ಮೂಲಕ ಬಂಜಾರ ಸಮಾಜಕ್ಕೆ ಅನ್ಯಾಯವಾಗಿದ್ದು, ಸರ್ಕಾರ ಸೇಡಿನ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದರು. ಬಂಜಾರ ಸಮಾಜಕ್ಕೆ ನ್ಯಾಯಯುತ ಮೀಸಲಾತಿ ಕಲ್ಪಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಪ್ರಭು ಚೌವ್ಹಾಣ್, ಮಾಜಿ ಸಂಸದ ಡಾ. ಉಮೇಶ್ ಜಾಧವ್, ಶಾಸಕ ಡಾ. ಚಂದ್ರು ಲಮಾಣಿ, ಬೀದರ್ ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ ಸೇರಿದಂತೆ ಬಂಜಾರ ಸಮಾಜದ ಮುಖಂಡರು ಹಾಗೂ ಅನೇಕ ಪ್ರಮುಖರು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande