ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳ ಜಯಂತ್ಯುತ್ಸವ
ದಾವಣಗೆರೆ, 01 ಜುಲೈ (ಹಿ.ಸ.): ಆ್ಯಂಕರ್:ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ನಡೆದ ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳ 91ನೇ ವರ್ಷದ ಜಯಂತ್ಯುತ್ಸವದಲ್ಲಿ ಸಚಿವ ಈಶ್ವರ ಖಂಡ್ರೆ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕದ ಮಠಮಾನ್ಯಗಳು ಅನ್ನ, ಅಕ್ಷರ ಹಾಗೂ ಆಶ್ರಯ ದಾಸೋಹದ
ಖಂಡ್ರೆ


ದಾವಣಗೆರೆ, 01 ಜುಲೈ (ಹಿ.ಸ.):

ಆ್ಯಂಕರ್:ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ನಡೆದ ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳ 91ನೇ ವರ್ಷದ ಜಯಂತ್ಯುತ್ಸವದಲ್ಲಿ ಸಚಿವ ಈಶ್ವರ ಖಂಡ್ರೆ ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕದ ಮಠಮಾನ್ಯಗಳು ಅನ್ನ, ಅಕ್ಷರ ಹಾಗೂ ಆಶ್ರಯ ದಾಸೋಹದ ಮೂಲಕ ಸಮಾಜದ ಅಭಿವೃದ್ಧಿಗೆ ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ಶ್ಲಾಘಿಸಿದರು. ಯುವಜನತೆ ಉತ್ತಮ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ದುಶ್ಚಟಗಳಿಂದ ದೂರವಿರಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಪತ್ರಿಕಾ ದಿನದ ಅಂಗವಾಗಿ ರಾಜ್ಯದ ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ಶುಭಾಶಯ ಕೋರಿದ ಸಚಿವರು, ಪ್ರಜಾಪ್ರಭುತ್ವದ ಯಶಸ್ವಿ ಕಾರ್ಯನಿರ್ವಹಣೆಯಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande