ಚಾರ್ಟರ್ಡ್ ಅಕೌಂಟೆಂಟ್ಗಳ ಸಂಸ್ಥಾಪನಾ ದಿನ: ಡಿ.ಕೆ. ಶಿವಕುಮಾರ್ ಶುಭಾಶಯ
ಬೆಂಗಳೂರು, 01 ಜುಲೈ (ಹಿ.ಸ.): ಆ್ಯಂಕರ್:ಚಾರ್ಟರ್ಡ್ ಅಕೌಂಟೆಂಟ್‌ಗಳು ದೇಶದ ಬಲಿಷ್ಠ ಹಾಗೂ ಸದೃಢ ಆರ್ಥಿಕ ವ್ಯವಸ್ಥೆಯ ಮೌನ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ 77ನೇ ಸಂಸ್ಥಾಪನಾ ದಿನದ ಅಂಗವಾಗಿ ಸಾಮಾಜಿಕ ಜಾಲತಾಣ ಎಕ್ಸ್ನಲ
Cm post


ಬೆಂಗಳೂರು, 01 ಜುಲೈ (ಹಿ.ಸ.):

ಆ್ಯಂಕರ್:ಚಾರ್ಟರ್ಡ್ ಅಕೌಂಟೆಂಟ್‌ಗಳು ದೇಶದ ಬಲಿಷ್ಠ ಹಾಗೂ ಸದೃಢ ಆರ್ಥಿಕ ವ್ಯವಸ್ಥೆಯ ಮೌನ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ 77ನೇ ಸಂಸ್ಥಾಪನಾ ದಿನದ ಅಂಗವಾಗಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಶುಭಾಶಯ ಕೋರಿರುವ ಅವರು, ದೇಶದ ಆರ್ಥಿಕ ಸಂಸ್ಥೆಗಳನ್ನು ಬಲಪಡಿಸುವಲ್ಲಿ ತಮ್ಮ ವೃತ್ತಿಪರತೆ ಹಾಗೂ ಹಣಕಾಸು ನಿರ್ವಹಣೆಯ ಮೂಲಕ ಮಹತ್ವದ ಕೊಡುಗೆ ನೀಡುತ್ತಿರುವ ಸಂಸ್ಥೆಯ ಪ್ರತಿಯೊಬ್ಬ ಸದಸ್ಯರು ಮತ್ತು ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಶುಭಾಶಯಗಳು ಎಂದು ತಿಳಿಸಿದ್ದಾರೆ.

ದೇಶದ ಅಭಿವೃದ್ಧಿ ಮತ್ತು ಸಮೃದ್ಧಿಗೆ ಅಮೂಲ್ಯ ಕೊಡುಗೆ ನೀಡುತ್ತಿರುವ ಚಾರ್ಟರ್ಡ್ ಅಕೌಂಟೆಂಟ್ ಸಮುದಾಯಕ್ಕೆ ನನ್ನ ಹಾರ್ದಿಕ ಶುಭಾಶಯಗಳು. ನಿಮ್ಮ ಸೇವೆ ರಾಷ್ಟ್ರದ ಆರ್ಥಿಕ ಪ್ರಗತಿಗೆ ಸದಾ ಪ್ರೇರಣೆಯಾಗಲಿ ಎಂದು ಡಿ.ಕೆ. ಶಿವಕುಮಾರ್ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande