ಸಫಾಯಿ ಕರ್ಮಚಾರಿಗಳಿಗೆ ಯೋಜನೆಗಳ ಸೌಲಭ್ಯ ವಿಳಂಬ ಮಾಡದೇ ತಲುಪಿಸಿ : ಡಿಸಿ
ಗದಗ, 01 ಜುಲೈ (ಹಿ.ಸ.): ಆ್ಯಂಕರ್: ಸಫಾಯಿ ಕರ್ಮಚಾರಿಗಳಿಗೆ ಯೋಜನೆಗಳ ಸೌಲಭ್ಯ ವಿಳಂಬ ಮಾಡದೇ ತಲುಪಿಸುವಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜರುಗಿದ ಜಿಲ್ಲಾ ಮಟ್ಟದ ಸಫಾಯಿ ಕರ್ಮ
ಫೋಟೋ


ಗದಗ, 01 ಜುಲೈ (ಹಿ.ಸ.):

ಆ್ಯಂಕರ್:

ಸಫಾಯಿ ಕರ್ಮಚಾರಿಗಳಿಗೆ ಯೋಜನೆಗಳ ಸೌಲಭ್ಯ ವಿಳಂಬ ಮಾಡದೇ ತಲುಪಿಸುವಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜರುಗಿದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪೌರಕಾರ್ಮಿಕರ ಆರೋಗ್ಯ ರಕ್ಷಣೆ ಮುಖ್ಯವಾಗಿದ್ದು ಅವರಿಗೆ ಗುಣಮಟ್ಟದ ಶುಚಿಯಾದ ಉಪಹಾರ ವಿತರಣೆಯಾಗುವಂತೆ ನೋಡಿಕೊಳ್ಳಬೇಕು. ಸಫಾಯಿ ಕರ್ಮಚಾರಿಗಳು ಕೆಲಸ ಮಾಡುವಾಗ ಬಳಸುವ ಹ್ಯಾಂಡ್ ಗ್ಲೋವ್ಸ್, ಫೇಸ್ ಮಾಸ್ಕ್, ಗಮ್ಬೂಟ್, ಸುರಕ್ಷತಾ ಜಾಕೆಟ್ ಮುಂತಾದ ಸುರಕ್ಷತಾ ಪರಿಕರಗಳು ಸದ್ಭಳಕೆಯಾಗುತ್ತಿರುವ ಕುರಿತು ಪರಿಶೀಲನೆ ನಡೆಸಬೇಕು ಎಂದರು.

ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ನಿಗದಿಪಡಿಸಿದ ವೇತನ ಪಾವತಿಸುವುದು ಹಾಗೂ ವಿವಿಧ ಸೌಲಭ್ಯಗಳನ್ನು ದೊರಕಿಸಿಕೊಡುವುದು ಅಧಿಕಾರಿಗಳು ಮಾಡಬೇಕು. ಗುತ್ತಿಗೆ ಸಫಾಯಿ ಕರ್ಮಚಾರಿಗಳಿಗೆ ಗುತ್ತಿಗೆ ಏಜೆನ್ಸಿದಾರರು ಸಮಯಕ್ಕೆ ಸರಿಯಾಗಿ ನಿಗದಿಪಡಿಸಿದ ವೇತನ ಸೌಲಭ್ಯಗಳನ್ನು ವಿತರಿಸುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಹಾಗೂ ವೇತನದೊಂದಿಗೆ ಇ.ಎಸ್.ಐ ಪಿಎಫ್ ಪಾವತಿಸುವ ಬಗ್ಗೆ ಪರಿಶೀಲಿಸಿ ನಿಯಮಾನುಸಾರ ಇದ್ದಲ್ಲಿ ಮಾತ್ರವೇ ಗುತ್ತಿಗೆದಾರರಿಗೆ ಹಣ ಸಂದಾಯ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಗದಗ ಬೆಟಗೇರಿ ನಗರಸಭೆಯ ಪೌರಕಾರ್ಮಿಕರಿಗೆ ಭೀಮಾಶ್ರಯ ವಿಶ್ರಾಂತಿ ಗೃಹ ನಿರ್ಮಾಣಕ್ಕೆ ಕ್ರಮ ವಹಿಸುವ ಕುರಿತು ಚರ್ಚಿಸಲಾಯಿತು. ಅನೈರ್ಮಲ್ಯ ಶೌಚಾಲಯಗಳ ನೆಲಸಮಗೊಳಿಸುವುದು ಹಾಗೂ ಸುರಕ್ಷತಾ ಪರಿಕರಗಳ ಬಳಕೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳ ಏರ್ಪಡಿಸುವ ಬಗ್ಗೆ ಇದೇ ಸಂದರ್ಭದಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಮಹಾಂತೇಶ ಸಜ್ಜನರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಬಿ.ಸಿ.ಕರಿಗೌಡ್ರ, ಲೀಡ್ ಬ್ಯಾಂಕ್ ಮ್ಯಾನೇಜರ್ ಸಂತೋಷ್ ಎಂ,ವಿ, ನಾಮನಿರ್ದೇಶಿತ ಸದಸ್ಯರಾದ ಎಸ್.ಎನ್.ಬಳ್ಳಾರಿ, ಚನ್ನಬಸಪ್ಪ ಬಿಳೆಯಲಿ, ಶ್ರೀಮತಿ ರೇಣುಕಾ ದೊಡ್ಡಮನಿ, ಶ್ರೀಮತಿ ಅಂಜನಾದೇವಿ ಮ್ಯಾಗೇರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀಮತಿ ನಂದಾ ಹಣಬರಟ್ಟಿ ಸರ್ವರನ್ನು ಸ್ವಾಗತಿಸಿ ವಂದಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande