
ಬಳ್ಳಾರಿ, 01 ಜುಲೈ (ಹಿ.ಸ.)
ಆ್ಯಂಕರ್ : ಬಳ್ಳಾರಿಯ ವಾಲ್ಮೀಕಿ ವೃತ್ತದಲ್ಲಿ ಪ್ರತಿಷ್ಠಾಪನೆಗೆ ಸಿದ್ಧವಾಗಿರುವ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಯನ್ನು ಸರ್ಕಾರ ಮತ್ತು ಜಿಲ್ಲಾಡಳಿತವು ಶೀಘ್ರದಲ್ಲಿ ಅನಾವರಣ ಮಾಡಲು ಆಗ್ರಹಿಸಿ ವಾಲ್ಮೀಕಿ ಸಮಾಜದ ಮುಖಂಡರು ಜಿಲ್ಲಾಡಳಿಕ್ಕೆ ಬುಧವಾರ ಮನವಿ ಸಲ್ಲಿಸಿದ್ದಾರೆ.
ಕಾಗೆ ಪಾರ್ಕ್ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿವರೆಗೆ ಸಾಗಿ, ಜಿಲ್ಲಾಧಿಕಾರಿ ಕೆ. ನಾಗೇಂದ್ರ ಕುಮಾರ್ ಅವರಿಗೆ ಮನವಿ ಸಲ್ಲಿಸಿ, ವಾಲ್ಮೀಕಿ ಪುತ್ಥಳಿಗೆ ಹೊದಿಸಿರುವ ಬಟ್ಟೆಯನ್ನು ಕೂಡಲೇ ತೆಗೆಯಬೇಕು. ಇಲ್ಲವಾದಲ್ಲಿ ಈ ತಿಂಗಳ ಕೊನೆ ಅಥವಾ ಮುಂದಿನ ತಿಂಗಳು ವಾಲ್ಮೀಕಿ ಸಮಾಜವೇ ಪುತ್ಥಳಿಯನ್ನು ಅನಾವರಣ ಮಾಡಲಿದೆ ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್