
ಗದಗ, 01 ಜುಲೈ (ಹಿ.ಸ.)
ಆ್ಯಂಕರ್:- ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಹಯೋಗದಲ್ಲಿ ಡಾ. ಫ. ಗು. ಹಳಕಟ್ಟಿಯವರ ಜನ್ಮದಿನದ ನಿಮಿತ್ಯ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ 2026 ಜುಲೈ 02 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಘನ ಉಪಸ್ಥಿತಿ ವಹಿಸುವರು.
ವಿಧಾನಸಭೆ ಶಾಸಕ ಡಾ. ಎಚ್. ಕೆ. ಪಾಟೀಲ್ ಉದ್ಘಾಟನೆ ಹಾಗೂ ಘನ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಮುಖ್ಯ ಸಚೇತಕರು ಹಾಗೂ ಶಾಸಕರು ಸಲೀಂ ಅಹ್ಮದ್, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಹಾಗೂ ರೋಣ ಶಾಸಕರಾದ ಜಿ.ಎಸ್. ಪಾಟೀಲ್, ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರು ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ. ಗದ್ದಿಗೌಡರ, ಕರ್ನಾಟಕ ರಾಜ್ಯ ವೀಕೆಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್. ಪಾಟೀಲ್, ನರಗುಂದ ಶಾಸಕ ಸಿ.ಸಿ. ಪಾಟೀಲ್, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ವಿಧಾನ ಪರಿಷತ್ತು ಶಾಸಕ ಎಸ್. ವ್ಹಿ.ಸಂಕನೂರ, ವಿಧಾನ ಪರಿಷತ್ತು ಶಾಸಕ ಪ್ರದೀಪ್ ಶೆಟ್ಟರ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖಿಕ್ಯ ಇಲಾಖೆಯ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಡಾ. ಎಂ. ವಿ.ವೆಂಕಟೇಶ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಶ್ರೀಮತಿ ಜಾನಕಿ ಕೆ. ಎಂ, ಆಗಮಿಸುವರು.
ಶರಣತತ್ವ ಚಿಂತಕರು ಅಶೋಕ ಬರಗುಂಡಿ ಉಪನ್ಯಾಸ ನೀಡಲಿದ್ದಾರೆ.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ. ಆರ್, ಭಾಗವಹಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ವ್ಹಿ. ಬಳ್ಳಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP