ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನ ಪ್ರವೇಶಾತಿ ಆರಂಭ
ಗದಗ, 01 ಜುಲೈ (ಹಿ.ಸ.) ಆ್ಯಂಕರ್:- ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್ಒಯು), ಮೈಸೂರು ಸುವರ್ಣಾವಕಾಶ ಕಲ್ಪಿಸಿದ್ದು, 2026-27ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕ, ಸ್ನಾತಕೋತ್ತರ, ಡಿಪ್ಲೊಮಾ ಹಾಗೂ ಪಿಜಿ ಸರ್ಟಿಫಿಕೇಟ್ ಕೋರ್ಸ್ಗಳಿಗೆ
ಫೋಟೋ


ಗದಗ, 01 ಜುಲೈ (ಹಿ.ಸ.)

ಆ್ಯಂಕರ್:- ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್ಒಯು), ಮೈಸೂರು ಸುವರ್ಣಾವಕಾಶ ಕಲ್ಪಿಸಿದ್ದು, 2026-27ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕ, ಸ್ನಾತಕೋತ್ತರ, ಡಿಪ್ಲೊಮಾ ಹಾಗೂ ಪಿಜಿ ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಉದ್ಯೋಗದಲ್ಲಿರುವವರು, ಶಿಕ್ಷಣದಿಂದ ದೂರ ಉಳಿದವರು ಹಾಗೂ ದೂರ ಶಿಕ್ಷಣದ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆಯಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಬಾರಿ ಕಲಾ, ವಾಣಿಜ್ಯ, ವಿಜ್ಞಾನ ಹಾಗೂ ವೃತ್ತಿಪರ ಶಿಕ್ಷಣ ಸೇರಿದಂತೆ ವಿವಿಧ ವಿಭಾಗಗಳ ಕೋರ್ಸ್ಗಳಿಗೆ ಪ್ರವೇಶ ಅವಕಾಶ ಕಲ್ಪಿಸಲಾಗಿದೆ. ಸ್ನಾತಕ ಪದವಿ ವಿಭಾಗದಲ್ಲಿ ಬಿ.ಎ., ಬಿ.ಕಾಂ., ಬಿ.ಲಿಬ್., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್ಸಿ. ಹಾಗೂ ಬಿ.ಎಸ್.ಡಬ್ಲ್ಯೂ. ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಬಹುದು. ಅದೇ ರೀತಿ ಸ್ನಾತಕೋತ್ತರ ವಿಭಾಗದಲ್ಲಿ ಎಂ.ಎ., ಎಂ.ಎ. (ಪತ್ರಿಕೋದ್ಯಮ), ಎಂ.ಕಾಂ., ಎಂ.ಬಿ.ಎ., ಎಂ.ಲಿಬ್., ಎಂ.ಎಸ್ಸಿ., ಎಂ.ಸಿ.ಎ. ಹಾಗೂ ಎಂ.ಎಸ್.ಡಬ್ಲ್ಯೂ. ಸೇರಿದಂತೆ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭವಾಗಿದೆ. ಜೊತೆಗೆ ವಿವಿಧ ಡಿಪ್ಲೊಮಾ ಹಾಗೂ ಪಿಜಿ ಸರ್ಟಿಫಿಕೇಟ್ ಕೋರ್ಸ್ಗಳಿಗೂ ಅರ್ಜಿ ಆಹ್ವಾನಿಸಲಾಗಿದೆ.

ಪ್ರವೇಶಾತಿ ಪ್ರಕ್ರಿಯೆಯನ್ನು ಸಂಪೂರ್ಣ ಆನ್ಲೈನ್ ಮೂಲಕ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಿರುವ ಮೂಲಕ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ, ಆನ್ಲೈನ್ ಮೂಲಕ ಶುಲ್ಕ ಪಾವತಿಸುವ ಮೂಲಕ ಪ್ರವೇಶಾತಿಯನ್ನು ಪೂರ್ಣಗೊಳಿಸಬಹುದಾಗಿದೆ. ಈ ವ್ಯವಸ್ಥೆಯಿಂದ ರಾಜ್ಯದ ಯಾವುದೇ ಭಾಗದಲ್ಲಿರುವ ವಿದ್ಯಾರ್ಥಿಗಳು ಸುಲಭವಾಗಿ ಪ್ರವೇಶ ಪಡೆಯುವ ಅವಕಾಶವನ್ನು ವಿಶ್ವವಿದ್ಯಾನಿಲಯ ಕಲ್ಪಿಸಿದೆ.

ದೂರ ಶಿಕ್ಷಣ ವ್ಯವಸ್ಥೆಯ ಮೂಲಕ ಗುಣಮಟ್ಟದ ಉನ್ನತ ಶಿಕ್ಷಣವನ್ನು ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಉದ್ಯೋಗದ ಜೊತೆಗೆ ವಿದ್ಯಾಭ್ಯಾಸ ಮುಂದುವರಿಸಲು ಬಯಸುವವರು, ಗೃಹಿಣಿಯರು, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿರುವ ಅಭ್ಯರ್ಥಿಗಳು ಹಾಗೂ ವಿವಿಧ ಕಾರಣಗಳಿಂದ ನಿಯಮಿತ ಕಾಲೇಜುಗಳಿಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಗದಗ ಪ್ರಾದೇಶಿಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ. ಗದಗ ನಗರದ ಎಲ್.ಎಲ್. ಕಟ್ಟಡ, ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆ ಸಮೀಪ, ಜನರಲ್ ಕೆ.ಎಂ. ಕಾರ್ಯಪ್ಪ ವೃತ್ತ (ಹಳೆಯ ಡಿಸಿ ಕಚೇರಿ ವೃತ್ತ)ದಲ್ಲಿರುವ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಗುತ್ತಿದೆ.

ಇದಲ್ಲದೆ ದೂರವಾಣಿ ಸಂಖ್ಯೆ 9663451169, 8884231002, 8970555801, 8549856177, 9008459778, 7259962717, 7338103445, 7483077355 ಹಾಗೂ 7899184338 ಸಂಖ್ಯೆಗಳಿಗೂ ಸಂಪರ್ಕಿಸಿ ಪ್ರವೇಶಾತಿ, ಅರ್ಹತೆ, ದಾಖಲೆಗಳು ಹಾಗೂ ಶುಲ್ಕ ಸೇರಿದಂತೆ ಅಗತ್ಯ ಮಾಹಿತಿಯನ್ನು ಪಡೆಯಬಹುದು.

2026-27ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆಯನ್ನು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಗದಗ ಪ್ರಾದೇಶಿಕ ನಿರ್ದೇಶಕ ಅಮೃತ್ ನಾಯ್ಡು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande