ಮಲ್ಲಿಕಾರ್ಜುನ್ ಖರ್ಗೆ ಭೇಟಿ ಮಾಡಿದ ಕಾಂಗ್ರೆಸ್ ಮುಖಂಡರು
ಬೆಂಗಳೂರು, 01 ಜುಲೈ (ಹಿ.ಸ.) ಆ್ಯಂಕರ್ : ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ಮಾಜಿ ಸಚಿವರು, ವಿಧಾನ ಪರಿಷತ್ ಸದಸ್ಯರಾದ ಎನ್ ಎಸ್ ಬೋಸರಾಜು ಹಾಗೂ ರಾಯಚೂರು ಲೋಕಸಭಾ ಕ್ಷೇತ್ರದ ಸಂಸದರಾದ ಜಿ ಕುಮಾರನಾಯ
Leaders who met AICC President Mallikarjun Kharge


Leaders who met AICC President Mallikarjun Kharge


ಬೆಂಗಳೂರು, 01 ಜುಲೈ (ಹಿ.ಸ.)

ಆ್ಯಂಕರ್ : ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ಮಾಜಿ ಸಚಿವರು, ವಿಧಾನ ಪರಿಷತ್ ಸದಸ್ಯರಾದ ಎನ್ ಎಸ್ ಬೋಸರಾಜು ಹಾಗೂ ರಾಯಚೂರು ಲೋಕಸಭಾ ಕ್ಷೇತ್ರದ ಸಂಸದರಾದ ಜಿ ಕುಮಾರನಾಯಕ್, ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮದ್, ಬಸನಗೌಡ ಬಾದರ್ಲಿ ಅವರು ಸೌಹಾರ್ದಯುತವಾಗಿ ಭೇಟಿಮಾಡಿ ಪಕ್ಷ ಸಂಘಟನೆ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸನಗೌಡ ತುರುವಿಹಾಳ, ಕಾಂಗ್ರೆಸ್ ಮುಖಂಡರು ಹಿಂದುಳಿದ ವರ್ಗದ ರಾಯಚೂರು ಜಿಲ್ಲೆಯ ಅಧ್ಯಕ್ಷರಾದ ಕೆ ಶಾಂತಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande