ರಾಜ್ಯದಲ್ಲಿ ಮುಂದಿನ 7 ದಿನಗಳ ಮಳೆ ಮುನ್ಸೂಚನೆ
ಬೆಂಗಳೂರು, 01 ಜುಲೈ (ಹಿ.ಸ.): ಆ್ಯಂಕರ್: ಭಾರತೀಯ ಹವಾಮಾನ ಇಲಾಖೆ ರಾಜ್ಯದಾದ್ಯಂತ ಮುಂದಿನ ಏಳು ದಿನಗಳ ಮಳೆ ಮುನ್ಸೂಚನೆಯನ್ನು ಪ್ರಕಟಿಸಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲ
Rain alert


ಬೆಂಗಳೂರು, 01 ಜುಲೈ (ಹಿ.ಸ.):

ಆ್ಯಂಕರ್:

ಭಾರತೀಯ ಹವಾಮಾನ ಇಲಾಖೆ ರಾಜ್ಯದಾದ್ಯಂತ ಮುಂದಿನ ಏಳು ದಿನಗಳ ಮಳೆ ಮುನ್ಸೂಚನೆಯನ್ನು ಪ್ರಕಟಿಸಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಲವೆಡೆ ಗುಡುಗು-ಸಿಡಿಲಿನೊಂದಿಗೆ ಗಂಟೆಗೆ 30–40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳು ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ಮಲೆನಾಡು ಭಾಗಗಳಲ್ಲಿ ಜುಲೈ 1 ಮತ್ತು 2ರಂದು ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವಿಕೆ ಹಾಗೂ ಗುಡ್ಡ ಕುಸಿತದಂತಹ ಘಟನೆಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ ಸೇರಿದಂತೆ ಹಲವು ಭಾಗಗಳಲ್ಲಿ ಜುಲೈ 1ರಿಂದ 4ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande