ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ವಿರುದ್ಧ ವಿಶೇಷ ಕಾರ್ಯಾಚರಣೆ
ಬೆಂಗಳೂರು, 01 ಜುಲೈ (ಹಿ.ಸ.): ಆ್ಯಂಕರ್:ಬೆಂಗಳೂರು ನಗರ ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಈಶಾನ್ಯ ವಿಭಾಗದ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಣಿ ಚೆನ್ನಮ್ಮ ಪಡೆಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಕಾರ್ಯಾಚರಣೆಯ ವೇಳೆ ಸಾರ್
SPL drive


ಬೆಂಗಳೂರು, 01 ಜುಲೈ (ಹಿ.ಸ.):

ಆ್ಯಂಕರ್:ಬೆಂಗಳೂರು ನಗರ ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಈಶಾನ್ಯ ವಿಭಾಗದ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಣಿ ಚೆನ್ನಮ್ಮ ಪಡೆಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಯಿತು.

ಕಾರ್ಯಾಚರಣೆಯ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದವರ ವಿರುದ್ಧ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿ, ನಿಯಮಾನುಸಾರ ದಂಡ ವಿಧಿಸಲಾಯಿತು.

ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಿಒಟಿಪಿಎ ಕಾಯ್ದೆಯ ಕುರಿತು ಅರಿವು ಮೂಡಿಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಕಾನೂನುಬಾಹಿರವಾಗಿದ್ದು, ಅದರ ಹೊಗೆ ಇತರರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವುದರಿಂದ ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪೊಲೀಸರು ಮನವಿ ಮಾಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ತಂಬಾಕು ಉತ್ಪನ್ನಗಳ ಅಕ್ರಮ ಬಳಕೆಯನ್ನು ತಡೆಗಟ್ಟುವ ಉದ್ದೇಶದಿಂದ ಇಂತಹ ವಿಶೇಷ ಕಾರ್ಯಾಚರಣೆಗಳನ್ನು ಮುಂದೆಯೂ ನಿರಂತರವಾಗಿ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಧೂಮಪಾನ ಮುಕ್ತ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರು ತಂಬಾಕು ನಿಯಂತ್ರಣ ಕಾನೂನುಗಳನ್ನು ಪಾಲಿಸಿ, ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande