ಭಾರೀ ಮಳೆಗೆ ಮಂಗಳೂರಿನಲ್ಲಿ ಮನೆ ಮೇಲೆ ಮಣ್ಣು ಕುಸಿದು ಮೂವರು ಸಾವು
ಮಂಗಳೂರು, 01 ಜುಲೈ (ಹಿ.ಸ.): ಆ್ಯಂಕರ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರಿನ ನಾಗುರಿ ಪ್ರದೇಶದಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ಭೂಕುಸಿತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮನೆ ಮೇಲೆ ಏಕಾಏಕಿ ಮಣ
ಘಟನಾ ಸ್ಥಳದಲ್ಲಿ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ


ಮಂಗಳೂರು, 01 ಜುಲೈ (ಹಿ.ಸ.):

ಆ್ಯಂಕರ್:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರಿನ ನಾಗುರಿ ಪ್ರದೇಶದಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ಭೂಕುಸಿತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮನೆ ಮೇಲೆ ಏಕಾಏಕಿ ಮಣ್ಣು ಕುಸಿದು ಬಿದ್ದ ಪರಿಣಾಮ ಓರ್ವ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರನ್ನು ರಕ್ಷಣಾ ಸಿಬ್ಬಂದಿ ಜೀವಂತವಾಗಿ ಹೊರತೆಗೆದಿದ್ದಾರೆ.

ಭೂಕುಸಿತ ಸಂಭವಿಸಿದ ತಕ್ಷಣ ಸ್ಥಳೀಯ ನಿವಾಸಿಗಳು, ಅಗ್ನಿಶಾಮಕ ದಳ, ಪೊಲೀಸರು ಹಾಗೂ ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದವು. ಮಣ್ಣಿನಡಿ ಸಿಲುಕಿದ್ದ ಬಾಲಕೃಷ್ಣ, ಅಲ್ಕಾ ಹಾಗೂ ಅನುಷಾ ಅವರನ್ನು ಸುರಕ್ಷಿತವಾಗಿ ಹೊರತೆಗೆದು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಶಾಂತ(೪೬), ಎಂಟು ವರ್ಷದ ಅನಾಮಿಕಾ ಚೌರಾಸಿಯಾ ಮತ್ತು ನಾಲ್ಕು ವರ್ಷದ ಪರಿ ಅವರನ್ನು ರಕ್ಷಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ

ಘಟನೆಯ ಮಾಹಿತಿ ತಿಳಿದ ಕೂಡಲೇ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡಿದ ಅವರು, ಅಗತ್ಯ ನೆರವು ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೃತರು ಹಾಗೂ ಗಾಯಾಳುಗಳು ಮೂಲತಃ ಬಿಹಾರ ರಾಜ್ಯದವರಾಗಿದ್ದು, ಕಳೆದ ಸುಮಾರು 20 ವರ್ಷಗಳಿಂದ ಮಂಗಳೂರಿನ ಕಂಕನಾಡಿ ಗ್ರಾಮದ ಕಂಕನಾಡಿ ಪೊಲೀಸ್ ಠಾಣೆ ಹಿಂಭಾಗದ ಪ್ರದೇಶದಲ್ಲಿ ನೆಲೆಸಿದ್ದರು ಎಂದು ಜಿಲ್ಲಾಧಿಕಾರಿ ದರ್ಶನ ತಿಳಿಸಿದ್ದಾರೆ.

ಇದೇ ವೇಳೆ ದೆಹಲಿ ಪ್ರವಾಸದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ ತಮ್ಮ ಪ್ರವಾಸ ಮೊಟಕುಗೊಳಿಸಿ ಮಧ್ಯಾಹ್ನ ಮಂಗಳೂರಿಗೆ ಆಗಮಿಸಲಿದ್ದು, ಜಿಲ್ಲಾಧಿಕಾರಿ ಜೊತೆಗೆ ದೂರವಾಣಿ ಮೂಲಕ ಮಾತನಾಡಿರುವ ಅವರು ಗಾಯಾಳುಗಳಿಗೆ ಸರಕಾರದ ವತಿಯಿಂದ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande