ನಾಳೆ ಚಿತ್ರದುರ್ಗದಲ್ಲಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ
ಚಿತ್ರದುರ್ಗ, 01 ಜುಲೈ (ಹಿ.ಸ.): ಆ್ಯಂಕರ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಡಾ. ಎಫ್.ಜಿ. ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ''ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ'' ಕಾರ್ಯಕ್ರಮವನ್ನು ಜುಲೈ 2ರಂದು ಬೆಳಿಗ
ನಾಳೆ ಚಿತ್ರದುರ್ಗದಲ್ಲಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ


ಚಿತ್ರದುರ್ಗ, 01 ಜುಲೈ (ಹಿ.ಸ.):

ಆ್ಯಂಕರ್:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಡಾ. ಎಫ್.ಜಿ. ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ 'ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ' ಕಾರ್ಯಕ್ರಮವನ್ನು ಜುಲೈ 2ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಚಳ್ಳಕೆರೆ ಶಾಸಕ ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ. ರಘುಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹೊಸದುರ್ಗ ಶಾಸಕ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ. ಗೋವಿಂದಪ್ಪ ಮತ್ತು ಸಂಸದ ಗೋವಿಂದ ಎಂ. ಕಾರಜೋಳ ಘನ ಉಪಸ್ಥಿತಿ ವಹಿಸಲಿದ್ದು, ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ.

ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಕನ್ನಡ ವಿಭಾಗದ ಉಪನ್ಯಾಸಕ ಡಾ. ಜಿ.ಎನ್. ಯಶೋಧರ ಅವರು ವಚನ ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದು, ಚಿತ್ರದುರ್ಗ ತಾಲ್ಲೂಕಿನ ಆಯಿತೋಳು ಮಾರುತಿ ಮತ್ತು ತಂಡದವರು ವಚನ ಗೀತಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಿ.ಎಂ. ಗುರುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande