ನಿತಿನ್ ನವೀನ್ ಕುರಿತು ರೇವಂತ್ ರೆಡ್ಡಿ ಹೇಳಿಕೆ ಅಹಂಕಾರದ ಪರಮಾವಧಿ: ಬಿಜೆಪಿ
ನವದೆಹಲಿ, 01 ಜುಲೈ (ಹಿ.ಸ.): ಆ್ಯಂಕರ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಕುರಿತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೀಡಿದ ಹೇಳಿಕೆಯನ್ನು ಭಾರತೀಯ ಜನತಾ ಪಕ್ಷ ತೀವ್ರವಾಗಿ ಖಂಡಿಸಿದ್ದು, ಅದನ್ನು ಅಹಂಕಾರದ ಪರಮಾವಧಿ ಎಂದು ಬಣ್ಣಿಸಿದೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರೇಮ್ ಶು
ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರೇಮ್ ಶುಕ್ಲಾ


ನವದೆಹಲಿ, 01 ಜುಲೈ (ಹಿ.ಸ.):

ಆ್ಯಂಕರ್:

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಕುರಿತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೀಡಿದ ಹೇಳಿಕೆಯನ್ನು ಭಾರತೀಯ ಜನತಾ ಪಕ್ಷ ತೀವ್ರವಾಗಿ ಖಂಡಿಸಿದ್ದು, ಅದನ್ನು ಅಹಂಕಾರದ ಪರಮಾವಧಿ ಎಂದು ಬಣ್ಣಿಸಿದೆ.

ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರೇಮ್ ಶುಕ್ಲಾ ಪ್ರತಿಕ್ರಿಯಿಸಿ, ವಿಶ್ವದ ಅತಿದೊಡ್ಡ ಪ್ರಜಾಸತ್ತಾತ್ಮಕ ರಾಜಕೀಯ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ನಿತಿನ್ ನವೀನ್ ಯಾರು ಎಂದು ಪ್ರಶ್ನಿಸುವುದು ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ. ಒಂದು ಕುಟುಂಬದ ರಾಜಕೀಯಕ್ಕೆ ಸೀಮಿತವಾಗಿರುವವರಿಂದಲೇ ಇಂತಹ ಪ್ರಶ್ನೆಗಳು ಬರುತ್ತವೆ ಎಂದು ಟೀಕಿಸಿದರು.

ಅವರು, ಭಾರತದ 22 ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಬಗ್ಗೆ ತಿಳಿಯದಿರುವುದು ಕಾಂಗ್ರೆಸ್‌ನ ಅಹಂಕಾರವನ್ನು ತೋರಿಸುತ್ತದೆ. ಇದೇ ಅಹಂಕಾರದಿಂದ ಕಳೆದ ಮೂರು ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲು ಕಂಡಿದೆ ಎಂದು ಆರೋಪಿಸಿದರು.

ತೆಲಂಗಾಣದಲ್ಲಿ ಒಟ್ಟು 17 ಲೋಕಸಭಾ ಕ್ಷೇತ್ರಗಳಿದ್ದು, ಅವುಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 8 ಸ್ಥಾನಗಳನ್ನು ಗೆದ್ದಿವೆ. ಆದರೂ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅಹಂಕಾರದ ಧೋರಣೆ ಪ್ರದರ್ಶಿಸುತ್ತಿದ್ದಾರೆ ಎಂದು ಪ್ರೇಮ್ ಶುಕ್ಲಾ ಹೇಳಿದರು.

ಈ ಅಹಂಕಾರ ಇನ್ನೂ ಕೆಲವೇ ತಿಂಗಳು ಇರುತ್ತದೆ. ಬಳಿಕ ತೆಲಂಗಾಣದಲ್ಲಿ ಬಿಜೆಪಿ ಕಮಲ ಅರಳಲಿದ್ದು, ಅಹಂಕಾರದ ರಾಜಕೀಯಕ್ಕೆ ಅಂತ್ಯವಾಗಲಿದೆ. ನಿತಿನ್ ನವೀನ್ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಜಯ ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇತ್ತೀಚೆಗೆ ಮೂರು ದಿನಗಳ ತೆಲಂಗಾಣ ಪ್ರವಾಸ ಕೈಗೊಂಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್, ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಹೋರಾಟ ಆರಂಭಿಸುವುದಾಗಿ ಘೋಷಿಸಿದ್ದರು. ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ್ದ ಅವರು, ಜನರ ಸಮಸ್ಯೆಗಳನ್ನು ಹಳ್ಳಿ-ಹಳ್ಳಿಗೂ, ನಗರ-ನಗರಕ್ಕೂ ಕೊಂಡೊಯ್ಯುವಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಇತ್ತೀಚೆಗೆ ನವೀನ್ ಅಥವಾ ಏನೋ ಹೆಸರಿನ ವ್ಯಕ್ತಿಯೊಬ್ಬರು ಇಲ್ಲಿ ಬಂದು ಮುಂದಿನ ಸರ್ಕಾರ ನಮ್ಮದೇ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಅವರ ತಂತ್ರಗಳು ಯಶಸ್ವಿಯಾಗಿರಬಹುದು. ಆದರೆ ತೆಲಂಗಾಣದಲ್ಲಿ ನಮ್ಮ ಕಾರ್ಯಕರ್ತರು ಸಜ್ಜಾಗಿದ್ದು, ಬಿಜೆಪಿಯ ಪ್ರಯತ್ನಗಳನ್ನು ವಿಫಲಗೊಳಿಸಲಿದ್ದಾರೆ ಎಂದು ಹೇಳಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande