ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಗಳ ಪ್ರವೇಶ: ಅರ್ಜಿ ಆಹ್ವಾನ
ಬಳ್ಳಾರಿ, 10 ಜುಲೈ (ಹಿ.ಸ.) ಆ್ಯಂಕರ್ : ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2026-27ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಸಾಮಾನ್ಯ
ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಗಳ ಪ್ರವೇಶ: ಅರ್ಜಿ ಆಹ್ವಾನ


ಬಳ್ಳಾರಿ, 10 ಜುಲೈ (ಹಿ.ಸ.)

ಆ್ಯಂಕರ್ : ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2026-27ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಸಾಮಾನ್ಯ ಪದವಿ ಮಟ್ಟದ ಕೋರ್ಸ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅವಕಾಶವಿರುತ್ತದೆ.

ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾ0ಶದ (ಸ್ಟೇಟ್ ಹಾಸ್ಟೆಲ್ ಪೋರ್ಟಲ್) ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನವಾಗಿದೆ.

ವಿದ್ಯಾರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಹಾಗೂ ಯಾವುದೇ ಗೊಂದಲಗಳಿದ್ದಲ್ಲಿ ಕೆಳಗಿನ ತಾಲೂಕು ಮಾಹಿತಿ ಕೇಂದ್ರಗಳನ್ನು ಅಥವಾ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು.

ಬಳ್ಳಾರಿ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಜೋಳದರಾಶಿ ದೊಡ್ಡನಗೌಡ ರಂಗಮ0ದಿರ ಹತ್ತಿರ, ಬಳ್ಳಾರಿ- ಮೊ.8310321101.

ಸಂಡೂರು: ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತೋಟಗಾರಿಕೆ ಇಲಾಖೆ, ಸಂಡೂರು- ಮೊ.9036925966 / 8660575061.

ಸಿರುಗುಪ್ಪ: ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನಗರಸಭೆ ಆವರಣ, ಬಳ್ಳಾರಿ ರಸ್ತೆ, ಸಿರುಗುಪ್ಪ- ಮೊ.9148889975 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande