ಆಲಮಟ್ಟಿ ಕಾಲುವೆಗಳಿಗೆ ನೀರು ಹರಿಸಲು ಅಖಂಡ ಕರ್ನಾಟಕ ರೈತ ಸಂಘ ಆಗ್ರಹ
ವಿಜಯಪುರ, 10 ಜುಲೈ (ಹಿ.ಸ.) ಆ್ಯಂಕರ್ : ಕೃಷಿ ಚಟುವಟಿಕೆಗಳು ವೇಗ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದ ವ್ಯಾಪ್ತಿಯ ಎಲ್ಲ ನೀರಾವರಿ ಕಾಲುವೆಗಳಿಗೆ ತಕ್ಷಣ ನೀರು ಹರಿಸುವಂತೆ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ್ ಕುಲಕರ್ಣಿ ಹಾಗೂ ರೈತ ಮುಖಂ
ವಾಟರ್


ವಿಜಯಪುರ, 10 ಜುಲೈ (ಹಿ.ಸ.)

ಆ್ಯಂಕರ್ : ಕೃಷಿ ಚಟುವಟಿಕೆಗಳು ವೇಗ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದ ವ್ಯಾಪ್ತಿಯ ಎಲ್ಲ ನೀರಾವರಿ ಕಾಲುವೆಗಳಿಗೆ ತಕ್ಷಣ ನೀರು ಹರಿಸುವಂತೆ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ್ ಕುಲಕರ್ಣಿ ಹಾಗೂ ರೈತ ಮುಖಂಡ ಲಕ್ಷ್ಮಣ್ ಕಂಬಾಗಿ ಅವರು ಕರ್ನಾಟಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಿ, ರೈತರ ಹಿತದೃಷ್ಟಿಯಿಂದ ಯಾವುದೇ ವಿಳಂಬವಿಲ್ಲದೆ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

ಮುಂಗಾರು ಆರಂಭವಾಗಿದ್ದರೂ ಹಲವೆಡೆ ಮಳೆಯ ಕೊರತೆಯಿಂದ ರೈತರು ಬಿತ್ತನೆ ಮಾಡಿದ ಬೆಳೆಗಳು ನೀರಿನ ಅಭಾವ ಎದುರಿಸುತ್ತಿವೆ. ಕಬ್ಬು ಸೇರಿದಂತೆ ವಿವಿಧ ವಾಣಿಜ್ಯ ಹಾಗೂ ಆಹಾರ ಬೆಳೆಗಳಿಗೆ ಈ ಸಂದರ್ಭದಲ್ಲಿ ನೀರಾವರಿ ಅತ್ಯಗತ್ಯವಾಗಿದೆ. ಆಲಮಟ್ಟಿ ಜಲಾಶಯದಲ್ಲಿ ನೀರಿನ ಲಭ್ಯತೆ ಇರುವುದರಿಂದ ಕಾಲುವೆಗಳಿಗೆ ನೀರು ಹರಿಸುವುದರಿಂದ ಲಕ್ಷಾಂತರ ಎಕರೆ ಕೃಷಿಭೂಮಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ನದಿಗೆ ನೀರು ಹರಿಸುವ ಬದಲು ಮೊದಲು ರೈತರ ಜಮೀನುಗಳಿಗೆ ಕಾಲುವೆಗಳ ಮೂಲಕ ನೀರು ತಲುಪಿಸುವ ಕ್ರಮ ಕೈಗೊಳ್ಳಬೇಕು. ಇದರಿಂದ ಬೆಳೆಗಳು ಒಣಗುವುದನ್ನು ತಡೆದು ರೈತರ ಆರ್ಥಿಕ ಸಂಕಷ್ಟವನ್ನು ಕಡಿಮೆ ಮಾಡಬಹುದು ಎಂದು ಅವರು ಅಭಿಪ್ರಾಯಪಟ್ಟರು.

ರಾಜ್ಯ ಸರ್ಕಾರ, ಜಲಸಂಪನ್ಮೂಲ ಇಲಾಖೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಆಲಮಟ್ಟಿ ಎಡ ಮತ್ತು ಬಲ ದಂಡೆ ಕಾಲುವೆಗಳಿಗೆ ನೀರು ಹರಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ರೈತರನ್ನು ಸಂಘಟಿಸಿ ಹೋರಾಟ ನಡೆಸಬೇಕಾಗುತ್ತದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ನಾಯಕರು ಎಚ್ಚರಿಕೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande