ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ 85%ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಮನ್ ಕಮಿಟಿಯಿಂದ ಸನ್ಮಾನ ಸಮಾರಂಭ
ಬಾಗಲಕೋಟೆ, 10 ಜುಲೈ (ಹಿ.ಸ.) ಆ್ಯಂಕರ್ : 2025–26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಸಾರ್ವಜನಿಕ ಪರೀಕ್ಷೆಗಳಲ್ಲಿ 85% ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಗೌರವಿಸುವ ಉದ್ದೇಶದಿಂದ ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಅಮನ್ ಕಮಿಟಿ ವತಿಯಿಂದ ವಿ
ಸನ್ಮಾನ


ಬಾಗಲಕೋಟೆ, 10 ಜುಲೈ (ಹಿ.ಸ.)

ಆ್ಯಂಕರ್ : 2025–26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಸಾರ್ವಜನಿಕ ಪರೀಕ್ಷೆಗಳಲ್ಲಿ 85% ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಗೌರವಿಸುವ ಉದ್ದೇಶದಿಂದ ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಅಮನ್ ಕಮಿಟಿ ವತಿಯಿಂದ ವಿಶೇಷ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮವು ಜುಲೈ 11, 2026ರ ಶನಿವಾರ ಸಂಜೆ 6.00 ಗಂಟೆಗೆ ಜಮಖಂಡಿಯ ಅಶ್ಫಾಕ್ ಉಲ್ಲಾ ಖಾನ್ ಸರ್ಕಲ್, ಜೋಳದ ಬಜಾರ್ನಲ್ಲಿ ನಡೆಯಲಿದ್ದು, ಇಂಗ್ಲಿಷ್ ಮೀಡಿಯಂ, ಉರ್ದು ಮೀಡಿಯಂ ಹಾಗೂ ಕನ್ನಡ ಮೀಡಿಯಂ ಸೇರಿದಂತೆ ಯಾವುದೇ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ 85% ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಎಲ್ಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಅಮನ್ ಕಮಿಟಿ ಸದಸ್ಯ ಫಿರ್ಜಾಸೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ನಿಗದಿತ ಸಮಯಕ್ಕೆ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿ ಸನ್ಮಾನ ಸ್ವೀಕರಿಸುವಂತೆ ಕೋರಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಸಾರ್ವಜನಿಕವಾಗಿ ಗುರುತಿಸಿ, ಮುಂದಿನ ಶಿಕ್ಷಣದ ಹಂತದಲ್ಲಿಯೂ ಹೆಚ್ಚಿನ ಸಾಧನೆ ಮಾಡಲು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಜಮಖಂಡಿಯ ಎಲ್ಲಾ ನಾಗರಿಕರು, ಪೋಷಕರು ಹಾಗೂ ಶಿಕ್ಷಣಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅಮನ್ ಕಮಿಟಿ, ಜಮಖಂಡಿ ಮನವಿ ಮಾಡಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande