ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಮಟ್ಟದ ಸಾಧಕ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ
ಗದಗ, 10 ಜುಲೈ (ಹಿ.ಸ.) ಆ್ಯಂಕರ್:- ಗದಗ ಜಿಲ್ಲೆಯ ವಿವಿಧ ಕ್ರೀಡೆಗಳಲ್ಲಿ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿರುವ ಕ್ರೀಡಾಪಟುಗಳ ಅಧಿಕೃತ ಮಾಹಿತಿಯನ್ನು ಸಂಗ್ರಹಿಸುವ ಉದ್ದೇಶದಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಅರ್ಹ ಕ್ರೀಡ
ಫೋಟೋ


ಗದಗ, 10 ಜುಲೈ (ಹಿ.ಸ.)

ಆ್ಯಂಕರ್:- ಗದಗ ಜಿಲ್ಲೆಯ ವಿವಿಧ ಕ್ರೀಡೆಗಳಲ್ಲಿ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿರುವ ಕ್ರೀಡಾಪಟುಗಳ ಅಧಿಕೃತ ಮಾಹಿತಿಯನ್ನು ಸಂಗ್ರಹಿಸುವ ಉದ್ದೇಶದಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಅರ್ಹ ಕ್ರೀಡಾಪಟುಗಳು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ತಮ್ಮ ಸಾಧನೆಯ ಮಾಹಿತಿಯನ್ನು ಇಲಾಖೆಗೆ ಒದಗಿಸುವಂತೆ ಮನವಿ ಮಾಡಲಾಗಿದೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕೇಂದ್ರ ಸರ್ಕಾರ ಹಾಗೂ ರಾಜ್ಯ ಮಟ್ಟದಲ್ಲಿ ಕ್ರೀಡಾಪಟುಗಳಿಗೆ ವಿವಿಧ ಯೋಜನೆಗಳು, ಪ್ರೋತ್ಸಾಹಧನ, ಗೌರವ ಹಾಗೂ ದಾಖಲಾತಿ ನಿರ್ವಹಣೆಗೆ ಸಂಬಂಧಿಸಿದಂತೆ ಅಧಿಕೃತ ಮಾಹಿತಿಯನ್ನು ಸಿದ್ಧಪಡಿಸುತ್ತಿದೆ. ಈ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ವಿವಿಧ ಕ್ರೀಡೆಗಳಲ್ಲಿ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ, ಪ್ರಶಸ್ತಿ ಅಥವಾ ಗಮನಾರ್ಹ ಸಾಧನೆ ಮಾಡಿದ ಕ್ರೀಡಾಪಟುಗಳ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ.

ಆಸಕ್ತ ಹಾಗೂ ಅರ್ಹ ಕ್ರೀಡಾಪಟುಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣ, ಗದಗದಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಅದನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಜುಲೈ 20, 2026ರೊಳಗಾಗಿ ಸಲ್ಲಿಸಬೇಕು.

ಅರ್ಜಿಯೊಂದಿಗೆ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ರಾಷ್ಟ್ರೀಯ ಅಥವಾ ಅಂತಾರಾಷ್ಟ್ರೀಯ ಮಟ್ಟದ ಸಾಧನೆಯನ್ನು ದೃಢೀಕರಿಸುವ ಪ್ರಶಸ್ತಿ ಪತ್ರಗಳು, ಪ್ರಮಾಣಪತ್ರಗಳು ಹಾಗೂ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಇಲಾಖೆಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ಸಲ್ಲಿಕೆಯಾಗುವ ಮಾಹಿತಿಯ ಆಧಾರದ ಮೇಲೆ ಜಿಲ್ಲೆಯ ಸಾಧಕ ಕ್ರೀಡಾಪಟುಗಳ ಅಧಿಕೃತ ದಾಖಲೆ ಸಿದ್ಧಪಡಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

ಈ ಕುರಿತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಶರಣು ಗೋಗೇರಿ ಮಾಹಿತಿ ನೀಡಿ, ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ನಿಗದಿತ ಅವಧಿಯೊಳಗೆ ತಮ್ಮ ಮಾಹಿತಿಯನ್ನು ಸಲ್ಲಿಸುವಂತೆ ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು. ಅಲ್ಲದೆ, ಮಂಜುನಾಥ್ ಬಾಗಡೆ (ಹಾಕಿ ತರಬೇತುದಾರರು) – 9036533909 ಹಾಗೂ ಶ್ರೀಮತಿ ವಿದ್ಯಾ ಕುಲಕರ್ಣಿ (ಸೈಕ್ಲಿಂಗ್ ತರಬೇತುದಾರರು) – 8951936636 ಅವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಕೆ ಹಾಗೂ ಅಗತ್ಯ ದಾಖಲೆಗಳ ಕುರಿತು ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande