
ಬಳ್ಳಾರಿ, 10 ಜುಲೈ (ಹಿ.ಸ.)
ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಫೀಡರ್ ಎಫ್-47 ರ ವಿದ್ಯುತ್ ಪರಿವರ್ತಕವನ್ನು ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿ0ದ ಜು.12 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಆಂದ್ರಾಳ್ ರಸ್ತೆ, ಕೊಲ್ಮಿ ಚೌಕ್, ಮಿಲ್ಲರ ಪೇಟೆ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಜೆಸ್ಕಾಂ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್