ಧಾರವಾಡ ಜಿಲ್ಲೆಯಲ್ಲಿ ಶೇ.85.52 ಮತದಾರರಿಗೆ ಗಣತಿ ನಮೂನೆ ವಿತರಣೆ
ಧಾರವಾಡ, 10 ಜುಲೈ (ಹಿ.ಸ.): ಆ್ಯಂಕರ್: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ ಧಾರವಾಡ ಜಿಲ್ಲೆಯಲ್ಲಿ ಜುಲೈ 10ರ ವೇಳೆಗೆ ಶೇ.85.52ರಷ್ಟು ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದ್ದಾರೆ.
DC dwd file photo


ಧಾರವಾಡ, 10 ಜುಲೈ (ಹಿ.ಸ.):

ಆ್ಯಂಕರ್:

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ ಧಾರವಾಡ ಜಿಲ್ಲೆಯಲ್ಲಿ ಜುಲೈ 10ರ ವೇಳೆಗೆ ಶೇ.85.52ರಷ್ಟು ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದ್ದಾರೆ.

ಜೂನ್ 30ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದು, ಜಿಲ್ಲೆಯ ಒಟ್ಟು 16,21,961 ಮತದಾರರ ಪೈಕಿ 13,87,063 ಮಂದಿಗೆ ನಮೂನೆಗಳನ್ನು ವಿತರಿಸಲಾಗಿದೆ. ಇದುವರೆಗೆ 1,51,231 ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದ್ದು, ಇದು ಶೇ.9.32ರಷ್ಟಾಗಿದೆ.

ಮನೆ-ಮನೆ ಭೇಟಿ ವೇಳೆ 6,540 ಮತದಾರರಿಗೆ ಸಂಬಂಧಿಸಿದ ಸ್ಥಳಾಂತರ, ಮರಣ, ದ್ವಿಪ್ರತಿ ಹಾಗೂ ಇತರ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ 3,244 ಶಾಶ್ವತ ವಲಸೆ, 2,565 ಮರಣ, 654 ದ್ವಿಪ್ರತಿ, 63 ಗೈರು ಹಾಗೂ 14 ಇತರೆ ಪ್ರಕರಣಗಳಾಗಿವೆ.

ಜಿಲ್ಲೆಯ ಎಲ್ಲ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಗಣತಿ ನಮೂನೆಗಳ ವಿತರಣೆ ಮತ್ತು ಗಣಕೀಕರಣ ಕಾರ್ಯ ಪ್ರಗತಿಯಲ್ಲಿದ್ದು, ಸಾರ್ವಜನಿಕರು ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಮೂನೆಗಳನ್ನು ಬಿಎಲ್‌ಒಗಳಿಗೆ ಸಲ್ಲಿಸಿ ಸಹಕರಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande