ಹಸಿಮೆಣಸಿನಕಾಯಿ, ದಾಳಿಂಬೆ ಬೆಳೆ ವಿಮೆ : ಜುಲೈ 31 ಕೊನೆಯ ದಿನಾಂಕ
ಬಳ್ಳಾರಿ, 10 ಜುಲೈ (ಹಿ.ಸ.) ಆ್ಯಂಕರ್ : ಪ್ರಕೃತಿ ವಿಕೋಪಗಳು ಹಾಗೂ ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ ಮತ್ತು ಸಿಡಿಲಿನಿಂದ ಉಂಟಾಗುವ ಅವಘಡಗಳಿಂದ ಬೆಳೆ ನಷ್ಟ ಅನುಭವಿಸುವ ರೈತರ ನೆರವಿಗಾಗಿ ಸರ್ಕಾರವು ‘ಮರುವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆವಿ
ಹಸಿಮೆಣಸಿನಕಾಯಿ, ದಾಳಿಂಬೆ ಬೆಳೆ ವಿಮೆ : ಜುಲೈ 31 ಕೊನೆಯ ದಿನಾಂಕ


ಬಳ್ಳಾರಿ, 10 ಜುಲೈ (ಹಿ.ಸ.)

ಆ್ಯಂಕರ್ : ಪ್ರಕೃತಿ ವಿಕೋಪಗಳು ಹಾಗೂ ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ ಮತ್ತು ಸಿಡಿಲಿನಿಂದ ಉಂಟಾಗುವ ಅವಘಡಗಳಿಂದ ಬೆಳೆ ನಷ್ಟ ಅನುಭವಿಸುವ ರೈತರ ನೆರವಿಗಾಗಿ ಸರ್ಕಾರವು ‘ಮರುವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆವಿಮೆ ಯೋಜನೆ’ಯನ್ನು ಜಾರಿಗೆ ತಂದಿದೆ.

ಬಳ್ಳಾರಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ಹಸಿಮೆಣಸಿನಕಾಯಿ ಹಾಗೂ ದಾಳಿಂಬೆ ಬೆಳೆಗಾರರಿಂದ ವಿಮೆ ನೋಂದಣಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯನ್ನು ಎಸ್ಬಿಐ ಜನರಲ್ ಇನ್ಶೂರನ್ಸ್ ಕಂಪನಿ ಲಿಮಿಟೆಡ್ ಸಂಸ್ಥೆಯ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಅರ್ಹ ರೈತರು ನಿಗದಿತ ಅವಧಿಯೊಳಗೆ ನೋಂದಾಯಿಸಿಕೊಳ್ಳಲು ಕೋರಲಾಗಿದೆ.

*ವಿಮೆ ವ್ಯಾಪ್ತಿಗೆ ಒಳಪಡುವ ಬೆಳೆಗಳು ಮತ್ತು ಪ್ರದೇಶಗಳು:*

*ಹಸಿಮೆಣಸಿನಕಾಯಿ:* ಬಳ್ಳಾರಿ ಮತ್ತು ಕುರುಗೋಡು ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳು.

*ದಾಳಿಂಬೆ:* ಕಂಪ್ಲಿ, ಸಂಡೂರು ಮತ್ತು ಸಿರುಗುಪ್ಪ ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳು.

*ವಿವರಗಳು ಮತ್ತು ಪ್ರೀಮಿಯಂ ಮೊತ್ತ:*

*ಹಸಿಮೆಣಸಿನಕಾಯಿ:* ವಿಮಾ ಮೊತ್ತ ಪ್ರತಿ ಹೆಕ್ಟೇರ್ಗೆ (ರೂ.ಗಳಲ್ಲಿ) ರೂ. 71,000/-, ಪ್ರತಿ ಹೆಕ್ಟೇರ್ಗೆ ರೈತರು ಪಾವತಿಸಬೇಕಾದ ಪ್ರೀಮಿಯಂ (ರೂ.ಗಳಲ್ಲಿ) ರೂ. 3,550/-, ವಿಮಾ ಮೊತ್ತ ಪಾವತಿಸಲು ಕೊನೆಯ ದಿನಾಂಕ – ಜುಲೈ 31.

*ದಾಳಿಂಬೆ:* ವಿಮಾ ಮೊತ್ತ ಪ್ರತಿ ಹೆಕ್ಟೇರ್ಗೆ (ರೂ.ಗಳಲ್ಲಿ) ರೂ. 1,27,000/-, ಪ್ರತಿ ಹೆಕ್ಟೇರ್ಗೆ ರೈತರು ಪಾವತಿಸಬೇಕಾದ ಪ್ರೀಮಿಯಂ (ರೂ.ಗಳಲ್ಲಿ) ರೂ. 6,350/-, ವಿಮಾ ಮೊತ್ತ ಪಾವತಿಸಲು ಕೊನೆಯ ದಿನಾಂಕ – ಜುಲೈ 31.

ಬೆಳೆ ವಿಮೆ ಕುರಿತು ಹೆಚ್ಚಿನ ವಿವರಗಳಿಗಾಗಿ ರೈತರು ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಅಥವಾ ಕೆಳಗಿನ ಕಚೇರಿ ವಿಳಾಸ ಹಾಗೂ ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದಾಗಿದೆ.

ಬಳ್ಳಾರಿ, ಕುರುಗೋಡು ಮತ್ತು ಕಂಪ್ಲಿ: ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ದೂ08392-278177, ಮೊ.9448511649.

ಸಂಡೂರು: ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ದೂ.08395-260389, ಮೊ.9740934208.

ಸಿರುಗುಪ್ಪ: ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ದೂ.08396-222066, ಮೊ.9448910277.

ರೈತರು ಯಾವುದೇ ಕೊನೆಯ ಕ್ಷಣದ ಗೊಂದಲಗಳನ್ನು ತಪ್ಪಿಸಲು ಜುಲೈ 31 ರೊಳಗಾಗಿ ತಮ್ಮ ಪ್ರೀಮಿಯಂ ಪಾವತಿಸಿ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕಾಗಿ ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande