ಸಾರ್ವಜನಿಕರ ಸಮಸ್ಯೆಗೆ ಕೆ ಆರ್ ಎಸ್ ಪಕ್ಷದ ಸ್ಪಂದನೆ
ಬಾಗಲಕೋಟೆ, 10 ಜುಲೈ (ಹಿ.ಸ.) ಆ್ಯಂಕರ್ : ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ತನ್ನ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿರುವ ಕೆಆರ್ಎಸ್ ಪಕ್ಷದ ಪ್ರಯತ್ನದಿಂದ ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ವಾರ್ಡ್ ಸಂಖ್ಯೆ 6ರ ನೀರಿನ ಟ್ಯಾಂಕ್ ಹಿಂಭಾಗದ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗ
ರಸ್ತೆ


ಬಾಗಲಕೋಟೆ, 10 ಜುಲೈ (ಹಿ.ಸ.)

ಆ್ಯಂಕರ್ : ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ತನ್ನ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿರುವ ಕೆಆರ್ಎಸ್ ಪಕ್ಷದ ಪ್ರಯತ್ನದಿಂದ ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ವಾರ್ಡ್ ಸಂಖ್ಯೆ 6ರ ನೀರಿನ ಟ್ಯಾಂಕ್ ಹಿಂಭಾಗದ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿದ್ದ ಮುಳ್ಳಿನ ಗಿಡಗಳನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗಿದೆ.

ವಾರ್ಡ್ನ ನೀರಿನ ಟ್ಯಾಂಕ್ ಹಿಂಭಾಗದ ರಸ್ತೆಯಲ್ಲಿ ಹಲವು ದಿನಗಳಿಂದ ಮುಳ್ಳಿನ ಕಂಠಿಗಳು ಬೆಳೆದು ರಸ್ತೆ ಆವರಿಸಿಕೊಂಡಿದ್ದವು. ಇದರಿಂದ ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು ಹಾಗೂ ಸ್ಥಳೀಯ ನಿವಾಸಿಗಳು ನಿತ್ಯ ಸಂಚಾರದಲ್ಲಿ ತೀವ್ರ ತೊಂದರೆ ಅನುಭವಿಸುತ್ತಿದ್ದರು. ಈ ಸಮಸ್ಯೆಯನ್ನು ಕೆಆರ್ಎಸ್ ಪಕ್ಷದ ಕಾರ್ಯಕರ್ತ ಮಲ್ಲಿಕ್ ಬಾರಿಗಡ್ಡಿ ಅವರು ಪಕ್ಷದ ತಾಲೂಕು ಅಧ್ಯಕ್ಷ ನಿಜಾಮ್ ಜಮಾದಾರ್ ಅವರ ಗಮನಕ್ಕೆ ತಂದಿದ್ದರು.

ಸಮಸ್ಯೆಯ ಗಂಭೀರತೆಯನ್ನು ಅರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿದ ಬಳಿಕ ಪೌರಕಾರ್ಮಿಕರು ಸ್ಥಳಕ್ಕೆ ಆಗಮಿಸಿ ರಸ್ತೆ ಬದಿಯಲ್ಲಿದ್ದ ಮುಳ್ಳಿನ ಗಿಡಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿ ಸ್ವಚ್ಛಗೊಳಿಸಿದರು. ಇದರಿಂದ ರಸ್ತೆ ಮತ್ತೆ ಸುಗಮ ಸಂಚಾರಕ್ಕೆ ಮುಕ್ತವಾಗಿದ್ದು, ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಕೆಆರ್ಎಸ್ ಪಕ್ಷದ ತಾಲೂಕು ಅಧ್ಯಕ್ಷ ನಿಜಾಮ್ ಜಮಾದಾರ್, ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪರಿಹಾರ ಕಲ್ಪಿಸುವುದು ನಮ್ಮ ಪಕ್ಷದ ಪ್ರಮುಖ ಗುರಿಯಾಗಿದೆ. ಜನರ ಸಹಕಾರ ಹಾಗೂ ಸಮಯೋಚಿತ ಮಾಹಿತಿ ಇದ್ದರೆ ಇಂತಹ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸಲು ಸಾಧ್ಯವಾಗುತ್ತದೆ. ವ್ಯವಸ್ಥೆಯ ಬದಲಾವಣೆ ಮತ್ತು ನಿರಂತರ ಜನಸೇವೆಯೇ ಕೆಆರ್ಎಸ್ ಪಕ್ಷದ ಧ್ಯೇಯವಾಗಿದೆ ಎಂದು ಹೇಳಿದರು.

ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದ ಪಕ್ಷದ ಕಾರ್ಯಕರ್ತ ಮಲ್ಲಿಕ್ ಬಾರಿಗಡ್ಡಿ, ಸಹಕರಿಸಿದ ಸ್ಥಳೀಯ ನಿವಾಸಿಗಳು ಹಾಗೂ ತಕ್ಷಣ ಕಾರ್ಯಪ್ರವೃತ್ತರಾಗಿ ರಸ್ತೆ ಸ್ವಚ್ಛಗೊಳಿಸಿದ ಪೌರಕಾರ್ಮಿಕರು ಮತ್ತು ಸಿಬ್ಬಂದಿಗೆ ನಿಜಾಮ್ ಜಮಾದಾರ್ ಕೃತಜ್ಞತೆ ಸಲ್ಲಿಸಿದರು.

ರಸ್ತೆ ಸ್ವಚ್ಛಗೊಳಿಸುವ ಮೊದಲು ಮತ್ತು ನಂತರದ ಚಿತ್ರಗಳು ಈ ಕಾರ್ಯದ ಪರಿಣಾಮವನ್ನು ಸ್ಪಷ್ಟವಾಗಿ ತೋರಿಸುತ್ತಿದ್ದು, ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಈ ಕ್ರಮ ಸಹಕಾರಿಯಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande