ಸ್ವಗ್ರಾಮ ತಿಮ್ಮಾಪುರದಲ್ಲಿ ಶಾಸಕ ಉಮೇಶ್ ಮೀಟಿ ಜನತಾ ದರ್ಶನ
ಬಾಗಲಕೋಟೆ, 10 ಜುಲೈ (ಹಿ.ಸ.) ಆ್ಯಂಕರ್ : ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಉದ್ದೇಶದಿಂದ ಶಾಸಕ ಉಮೇಶ್ ಮೇಟಿ ಅವರು ತಮ್ಮ ಸ್ವಗ್ರಾಮ ಬಾಗಲಕೋಟೆ ತಾಲೂಕಿನ ತಿಮ್ಮಾಪುರದಲ್ಲಿ ಇಂದು ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಸಿದರು. ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಭಾಗಗಳಿಂದ ಆಗ
ಅಬಹಲು


ಬಾಗಲಕೋಟೆ, 10 ಜುಲೈ (ಹಿ.ಸ.)

ಆ್ಯಂಕರ್ :

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಉದ್ದೇಶದಿಂದ ಶಾಸಕ ಉಮೇಶ್ ಮೇಟಿ

ಅವರು ತಮ್ಮ ಸ್ವಗ್ರಾಮ ಬಾಗಲಕೋಟೆ ತಾಲೂಕಿನ ತಿಮ್ಮಾಪುರದಲ್ಲಿ ಇಂದು ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಸಿದರು. ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ರಸ್ತೆ, ಕುಡಿಯುವ ನೀರು, ವಿದ್ಯುತ್, ಪಿಂಚಣಿ, ವಸತಿ, ಭೂ ದಾಖಲೆ, ಒಳಚರಂಡಿ, ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಶಾಸಕರ ಗಮನಕ್ಕೆ ತಂದರು.

ಅಹವಾಲುಗಳನ್ನು ಆಲಿಸಿದ ಶಾಸಕ ಉಮೇಶ್ ಮೇಟಿ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ದೂರವಾಣಿ ಮೂಲಕ ಸಂಪರ್ಕಿಸಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು, ಅರ್ಹ ಹಾಗೂ ತುರ್ತು ಪ್ರಕರಣಗಳನ್ನು ವಿಳಂಬವಿಲ್ಲದೆ ಪರಿಹರಿಸುವಂತೆ ಸ್ಪಷ್ಟ ನಿರ್ದೇಶನ ನೀಡಿದರು. ಸಾರ್ವಜನಿಕರಿಗೆ ಅನಗತ್ಯವಾಗಿ ಕಚೇರಿಗಳ ಅಲೆದಾಟ ಆಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಮೇಟಿ ಅವರು, ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಯ ಮೊದಲ ಕರ್ತವ್ಯ. ಪ್ರತಿಯೊಬ್ಬರ ಅಹವಾಲನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಪರಿಹಾರ ಕಲ್ಪಿಸಲು ನಾನು ಬದ್ಧನಾಗಿದ್ದೇನೆ. ಅಭಿವೃದ್ಧಿ ಕಾಮಗಾರಿಗಳ ಜೊತೆಗೆ ಸಾರ್ವಜನಿಕರ ದೈನಂದಿನ ಸಮಸ್ಯೆಗಳಿಗೂ ಆದ್ಯತೆ ನೀಡಲಾಗುತ್ತಿದೆ, ಎಂದು ಹೇಳಿದರು.

ಅಹವಾಲು ಸಲ್ಲಿಸಿದ ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ ತಕ್ಷಣವೇ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರ ಕಾರ್ಯವೈಖರಿಯನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ಜನಸಾಮಾನ್ಯರಿಗೆ ನೇರವಾಗಿ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರಕ್ಕೆ ಮುಂದಾಗಿರುವುದು ಜನರಲ್ಲಿ ವಿಶ್ವಾಸ ಮೂಡಿಸಿದೆ ಎಂದು ಹಲವರು ಅಭಿಪ್ರಾಯಪಟ್ಟರು.

ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande