ಅಂಗನವಾಡಿ ನೌಕರರನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆ
ಬಾಗಲಕೋಟೆ, 10 ಜುಲೈ (ಹಿ.ಸ.) ಆ್ಯಂಕರ್ : ಅಂಗನವಾಡಿ ನೌಕರರನ್ನು ಖಾಯಂ ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ, ಅವರಿಗೆ ಸರ್ಕಾರಿ ನೌಕರರ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಶುಕ್ರವಾರ ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂದೆ ಬೃಹತ್
ಪ್ರೊಟೆಸ್ಟ್


ಬಾಗಲಕೋಟೆ, 10 ಜುಲೈ (ಹಿ.ಸ.)

ಆ್ಯಂಕರ್ : ಅಂಗನವಾಡಿ ನೌಕರರನ್ನು ಖಾಯಂ ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ, ಅವರಿಗೆ ಸರ್ಕಾರಿ ನೌಕರರ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಶುಕ್ರವಾರ ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಭಾಗವಹಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ತಮ್ಮನ್ನು ಗೌರವಯುತವಾಗಿ ಪರಿಗಣಿಸದೆ, ಅಲ್ಪ ಗೌರವಧನದಲ್ಲೇ ಕೆಲಸ ಮಾಡಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಅಂಗನವಾಡಿ ನೌಕರರು ಮಕ್ಕಳ ಪೌಷ್ಟಿಕತೆ, ಗರ್ಭಿಣಿಯರು ಹಾಗೂ ಬಾಣಂತಿಯರ ಆರೈಕೆ, ಲಸಿಕಾ ಕಾರ್ಯಕ್ರಮಗಳು ಸೇರಿದಂತೆ ಅನೇಕ ಸರ್ಕಾರಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಶ್ರಮಿಸುತ್ತಿದ್ದರೂ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಇಲ್ಲದಿರುವುದು ದುಃಖಕರ ಸಂಗತಿ ಎಂದು ಸಂಘದ ಮುಖಂಡರು ತಿಳಿಸಿದರು.

ಪ್ರಮುಖ ಬೇಡಿಕೆಗಳಾಗಿ ಅಂಗನವಾಡಿ ನೌಕರರನ್ನು ಖಾಯಂ ಸರ್ಕಾರಿ ನೌಕರರನ್ನಾಗಿ ಘೋಷಿಸುವುದು, ಸಮರ್ಪಕ ವೇತನ ಜಾರಿಗೊಳಿಸುವುದು, ನಿವೃತ್ತಿ ವೇತನ, ವೈದ್ಯಕೀಯ ಸೌಲಭ್ಯ, ಇಎಸ್ಐ, ಪಿಎಫ್ ಸೇರಿದಂತೆ ಎಲ್ಲಾ ಕಾರ್ಮಿಕ ಹಕ್ಕುಗಳನ್ನು ಕಲ್ಪಿಸುವುದು ಹಾಗೂ ಸೇವಾ ಭದ್ರತೆ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಬೇಡಿಕೆಗಳನ್ನು ಶೀಘ್ರ ಈಡೇರಿಸದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸಂಘದ ಮುಖಂಡರು ಎಚ್ಚರಿಕೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande