ಸಂಸದ ರಮೇಶ್ ಜಿಗಜಿಣಗಿ ನಿವಾಸಕ್ಕೆ ಪಾಲಿಕೆ ಆಯುಕ್ತರ ಭೇಟಿ: ಎಸ್ಐಆರ್ ನಮೂನೆ ವಿತರಣೆ
ವಿಜಯಪುರ, 10 ಜುಲೈ (ಹಿ.ಸ.) ಆ್ಯಂಕರ್ : ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 4ರಲ್ಲಿ ಇಂದು ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದರಾದ ರಮೇಶ್ ಜಿಗಜಿಣಗಿ ಅವರ ನಿವಾಸಕ್ಕೆ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಎಸ್ಐಆರ್ ಪ್ರಕ್ರಿಯೆಯ ನೋಡಲ್ ಅಧಿಕಾರಿಯಾಗಿರುವ ವಿಜಯಕುಮಾರ್ ಮೆಕ್ಕಳಕಿ ಅವರು
ಮತದಾನ


ವಿಜಯಪುರ, 10 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 4ರಲ್ಲಿ ಇಂದು ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದರಾದ ರಮೇಶ್ ಜಿಗಜಿಣಗಿ ಅವರ ನಿವಾಸಕ್ಕೆ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಎಸ್ಐಆರ್ ಪ್ರಕ್ರಿಯೆಯ ನೋಡಲ್ ಅಧಿಕಾರಿಯಾಗಿರುವ ವಿಜಯಕುಮಾರ್ ಮೆಕ್ಕಳಕಿ ಅವರು ಸಿಬ್ಬಂದಿಗಳೊಂದಿಗೆ ಭೇಟಿ ನೀಡಿ ಎಸ್ಐಆರ್ ಸಂಬಂಧಿತ ನಮೂನೆಗಳನ್ನು ವಿತರಿಸಿದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನದ ಅಂಗವಾಗಿ ಮನೆ-ಮನೆಗೆ ಭೇಟಿ ನೀಡಿ ಅರ್ಹ ಮತದಾರರಿಗೆ ನಮೂನೆಗಳನ್ನು ವಿತರಿಸುವ ಹಾಗೂ ಅಗತ್ಯ ಮಾಹಿತಿ ನೀಡುವ ಕಾರ್ಯವನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ಎಸ್ಐಆರ್ ಪ್ರಕ್ರಿಯೆಯ ಉದ್ದೇಶ, ನಮೂನೆಗಳನ್ನು ಸರಿಯಾಗಿ ಭರ್ತಿ ಮಾಡುವ ವಿಧಾನ ಹಾಗೂ ನಿಗದಿತ ಅವಧಿಯೊಳಗೆ ಸಲ್ಲಿಸುವ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು.

ನಗರದ ಎಲ್ಲಾ ವಾರ್ಡ್ಗಳಲ್ಲಿ ಎಸ್ಐಆರ್ ಅಭಿಯಾನವನ್ನು ಯಶಸ್ವಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮನೆ-ಮನೆಗೆ ತೆರಳಿ ಮತದಾರರಿಗೆ ಜಾಗೃತಿ ಮೂಡಿಸುತ್ತಿದ್ದು, ಅರ್ಹ ನಾಗರಿಕರು ಅಗತ್ಯ ದಾಖಲೆಗಳೊಂದಿಗೆ ನಮೂನೆಗಳನ್ನು ಭರ್ತಿ ಮಾಡಿ ಸಮಯಕ್ಕೆ ಸರಿಯಾಗಿ ಸಲ್ಲಿಸುವಂತೆ ಮನವಿ ಮಾಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸಿಬ್ಬಂದಿಗಳು ಹಾಗೂ ಸಂಬಂಧಿತ ಅಧಿಕಾರಿಗಳು ಉಪಸ್ಥಿತರಿದ್ದರು. ಎಸ್ಐಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ ಮತದಾರರ ಪಟ್ಟಿಯನ್ನು ನಿಖರ ಹಾಗೂ ಸಮಗ್ರವಾಗಿಸಲು ಸಹಕರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande