ಆಸ್ಟ್ರೇಲಿಯಾದಿಂದ ನ್ಯೂಜಿಲೆಂಡ್ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ, 10 ಜುಲೈ (ಹಿ.ಸ.): ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಮೆಲ್ಬೋರ್ನ್ ಪ್ರವಾಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ಪ್ರಯಾಣ ಬೆಳೆಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ. ಸಾಮಾಜಿಕ ಜಾ
ನ್ಯೂಜಿಲೆಂಡ್ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ


ನವದೆಹಲಿ, 10 ಜುಲೈ (ಹಿ.ಸ.):

ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಮೆಲ್ಬೋರ್ನ್ ಪ್ರವಾಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ಪ್ರಯಾಣ ಬೆಳೆಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಭಾರತ–ಆಸ್ಟ್ರೇಲಿಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿಯವರ ಈ ಭೇಟಿ ಮಹತ್ವದ್ದಾಗಿತ್ತು ಎಂದು ಹೇಳಿದ್ದಾರೆ.

ಆಸ್ಟ್ರೇಲಿಯಾದ ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರನ್ನು ಬೀಳ್ಕೊಟ್ಟರು. ಕಾರ್ಯತಂತ್ರದ ರಕ್ಷಣಾ ಸಹಕಾರ, ಆರ್ಥಿಕ ಸಹಭಾಗಿತ್ವ, ಶಿಕ್ಷಣ, ಕ್ರೀಡೆ ಹಾಗೂ ಎರಡೂ ದೇಶಗಳ ಜನರ ನಡುವಿನ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ಹೊಸ ಸಹಕಾರದ ಅವಕಾಶಗಳಿಗೆ ಈ ಭೇಟಿ ದಾರಿ ಮಾಡಿಕೊಟ್ಟಿದೆ ಎಂದು ಜೈಸ್ವಾಲ್ ತಿಳಿಸಿದ್ದಾರೆ.

ಮೋದಿ ಅವರ ವಿದೇಶ ಪ್ರವಾಸದ ಅಂತಿಮ ಹಂತವಾಗಿ ಅವರು ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ತೆರಳಿದ್ದಾರೆ ಎಂದು ಅವರು ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande