
ಬೆಂಗಳೂರು, 10 ಜುಲೈ (ಹಿ.ಸ.):
ಆ್ಯಂಕರ್:
ರಾಜ್ಯದಾದ್ಯಂತ ಇಂದು ಅಲ್ಲಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು ಹಾಗೂ ಅನಗತ್ಯವಾಗಿ ಹೊರಗಡೆ ಸಂಚರಿಸುವುದನ್ನು ತಪ್ಪಿಸಬೇಕು ಎಂದು ಸಲಹೆ ನೀಡಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.