ಜುಲೈ 14ರೊಳಗೆ ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಿ, ಇಲ್ಲದಿದ್ದರೆ ಉಗ್ರ ಹೋರಾಟ: ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಎಚ್ಚರಿಕೆ
ವಿಜಯಪುರ, 10 ಜುಲೈ (ಹಿ.ಸ.) ಆ್ಯಂಕರ್ : ಏತ ನೀರಾವರಿ ಯೋಜನೆಗಳಿಗೆ ಜುಲೈ 14ರೊಳಗೆ ನೀರು ಹರಿಸದಿದ್ದರೆ ರೈತರೊಂದಿಗೆ ಸೇರಿ ಉಗ್ರ ಹೋರಾಟ ನಡೆಸಲಾಗುವುದು ಎಂದು ವಿಜಯಪುರದಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ರಾಜ್ಯ ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮಳೆಗ
ಹೊರಟ


ವಿಜಯಪುರ, 10 ಜುಲೈ (ಹಿ.ಸ.)

ಆ್ಯಂಕರ್ : ಏತ ನೀರಾವರಿ ಯೋಜನೆಗಳಿಗೆ ಜುಲೈ 14ರೊಳಗೆ ನೀರು ಹರಿಸದಿದ್ದರೆ ರೈತರೊಂದಿಗೆ ಸೇರಿ ಉಗ್ರ ಹೋರಾಟ ನಡೆಸಲಾಗುವುದು ಎಂದು ವಿಜಯಪುರದಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ರಾಜ್ಯ ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಮಳೆಗಾಲ ಆರಂಭವಾಗಿದ್ದರೂ ಅನೇಕ ಭಾಗಗಳ ರೈತರು ಇನ್ನೂ ನೀರಾವರಿ ನೀರಿನ ನಿರೀಕ್ಷೆಯಲ್ಲಿದ್ದಾರೆ. ಏತ ನೀರಾವರಿ ಯೋಜನೆಗಳ ಮೂಲಕ ನೀರು ಪೂರೈಕೆಯಾಗಬೇಕಿದ್ದ ಪ್ರದೇಶಗಳಲ್ಲಿ ವಿಳಂಬವಾಗುತ್ತಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ತಕ್ಷಣವೇ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಜುಲೈ 14ರೊಳಗೆ ನೀರು ಹರಿಸುವ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕೃಷಿ ಚಟುವಟಿಕೆಗಳು ಈಗಾಗಲೇ ಆರಂಭವಾಗಿದ್ದು, ಸಮಯಕ್ಕೆ ನೀರು ದೊರೆಯದಿದ್ದರೆ ಬೆಳೆಗಳ ಬೆಳವಣಿಗೆ ಮೇಲೆ ಗಂಭೀರ ಪರಿಣಾಮ ಬೀಳಲಿದೆ. ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಆದ್ದರಿಂದ ಸರ್ಕಾರ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು ಎಂದು ಅವರು ಹೇಳಿದರು.

ಸರ್ಕಾರ ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ತುರ್ತು ಕ್ರಮ ಕೈಗೊಂಡರೆ ಹೋರಾಟದ ಅವಶ್ಯಕತೆ ಎದುರಾಗುವುದಿಲ್ಲ. ಆದರೆ ರೈತರ ಸಮಸ್ಯೆಯನ್ನು ಕಡೆಗಣಿಸಿದರೆ ರೈತ ಸಂಘಟನೆಗಳು ಹಾಗೂ ಸಾರ್ವಜನಿಕರನ್ನು ಒಗ್ಗೂಡಿಸಿಕೊಂಡು ಉಗ್ರ ಹೋರಾಟ ನಡೆಸಲಾಗುವುದು. ಅದರ ಸಂಪೂರ್ಣ ಹೊಣೆಯನ್ನು ಸರ್ಕಾರವೇ ಹೊರಬೇಕಾಗುತ್ತದೆ ಎಂದು ಎಸ್.ಕೆ. ಬೆಳ್ಳುಬ್ಬಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರೈತರಿಗೆ ಸಮಯಕ್ಕೆ ನೀರು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದ್ದು, ಸಂಬಂಧಿಸಿದ ಇಲಾಖೆಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಲಿಫ್ಟ್ ನೀರಾವರಿ ಯೋಜನೆಗಳಿಗೆ ನೀರು ಹರಿಸುವಂತೆ ಅವರು ಒತ್ತಾಯಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande