ಸುಖವಾಗಿರಲು ಮಿತ ಸಂಸಾರ ಅಗತ್ಯ ; ಡಾ. ರವೀಂದ್ರನಾಥ
ಕೊಪ್ಪಳ, 10 ಜುಲೈ (ಹಿ.ಸ.) ಆ್ಯಂಕರ್ : ಮಿತ ಸಂಸಾರವು ಅತ್ಯಂತ ಸುಖ ಹಾಗೂ ಲಾಭದಾಯಕವಾಗಿದ್ದು ಉತ್ತಮ ಆರೋಗ್ಯ ಮತ್ತು ಶಿಕ್ಷಣವನ್ನು ಹೊಂದಬಹುದಾಗಿದೆ ಎಂದು ಕುಟುಂಬ ಕಲ್ಯಾಣ ಅಧಿಕಾರಿಯಾದ ಡಾ. ರವೀಂದ್ರನಾಥ ಹೇಳಿದರು. ತಾಲೂಕಿನ ಗೊಂಡಬಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಹಳೆ ಬಂಡಬಾ
ಕೊಪ್ಪಳ


ಕೊಪ್ಪಳ


ಕೊಪ್ಪಳ


ಕೊಪ್ಪಳ, 10 ಜುಲೈ (ಹಿ.ಸ.)

ಆ್ಯಂಕರ್ : ಮಿತ ಸಂಸಾರವು ಅತ್ಯಂತ ಸುಖ ಹಾಗೂ ಲಾಭದಾಯಕವಾಗಿದ್ದು ಉತ್ತಮ ಆರೋಗ್ಯ ಮತ್ತು ಶಿಕ್ಷಣವನ್ನು ಹೊಂದಬಹುದಾಗಿದೆ ಎಂದು ಕುಟುಂಬ ಕಲ್ಯಾಣ ಅಧಿಕಾರಿಯಾದ ಡಾ. ರವೀಂದ್ರನಾಥ ಹೇಳಿದರು.

ತಾಲೂಕಿನ ಗೊಂಡಬಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಹಳೆ ಬಂಡಬಾಳ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕೊಪ್ಪಳ, ಜಿಲ್ಲಾ ಹಾಗೂ ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗೊಂಡಬಾಳ ಇವರ ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಶುಕ್ರವಾರ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರವೀಂದ್ರನಾಥ ಮಾತನಾಡುತ್ತಾ ಪ್ರತಿ ವರ್ಷ ಜುಲೈ 11ರಂದು ವಿಶ್ವ ಜನಸಂಖ್ಯೆ ದಿನವನ್ನು ಆಚರಿಸಲಾಗುತ್ತಿದೆ ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ಬಡತನ, ಪರಿಸರ ಮಾಲಿನ್ಯ, ನಿರುದ್ಯೋಗ ಮತ್ತು ಸಂಪನ್ಮೂಲಗಳ ಕೊರತೆಯ ಬಗ್ಗೆ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದ್ದು ಇದರ ಜೊತೆಗೆ ಕುಟುಂಬ ಯೋಜನೆ ಮತ್ತು ಆರೋಗ್ಯದ ಕುರಿತು ಜನರಿಗೆ ಅರಿವು ಮೂಡಿಸುವ ಉದ್ದೇಶವನ್ನು ಹೊಂದಲಾಗಿದೆ.

ಹೆಚ್ಚುತ್ತಿರುವ ಜನಸಂಖ್ಯೆ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಿ ಜನಸಂಖ್ಯಾ ಸ್ಫೋಟದಿಂದ ಉಂಟಾಗುವ ಗಂಭೀರ ಪರಿಣಾಮಗಳ ಕುರಿತು ತಿಳುವಳಿಕೆ ನೀಡಲು ಈ ದಿನವನ್ನು ಮೀಸಲಿರಿಸಲಾಗಿದೆ. 1987 ರ ಜುಲೈ 11ರಂದು ವಿಶ್ವದ ಜನಸಂಖ್ಯೆ 500 ಕೋಟಿ ಗಡಿ ತಲುಪಿದ್ದು ಈ ಬೆಳವಣಿಗೆ ಕುರಿತು ಕಳವಳ ವ್ಯಕ್ತಪಡಿಸುತ್ತಾ ವಿಶ್ವಸಂಸ್ಥೆ ಜನಸಂಖ್ಯೆ ಸಮಸ್ಯೆಗಳ ಬಗ್ಗೆ ಜಾಗತಿಕ ಗಮನ ಸೆಳೆಯಲು ಈ ದನವನ್ನು ಅಧಿಕೃತ ಘೋಷಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ಮಂಜುನಾಥ ಬ್ಯಾಲಹುಣಸಿ ಮಾತನಾಡುತ್ತಾ ಜನಸಂಖ್ಯೆಯ ಏರಿಕೆ ಬಹುತೇಕವಾಗಿ ಬಡತನ, ಅಜ್ಞಾನ, ಮೌಢ್ಯಯುತ ಧಾರ್ಮಿಕ ಶ್ರದ್ಧೆ ಗಳಿಗೆ ಕಾರಣವಾಗಿದೆ. ಮಿತ ಸಂಸಾರದಿಂದ ನಮ್ಮ ಮಕ್ಕಳನ್ನು ಜವಾಬ್ದಾರಿಯುತವಾಗಿ ಆಹಾರ, ಆರೋಗ್ಯ ಜ್ಞಾನಕೊಟ್ಟು ಸಾಕುತ್ತೇವೆ, ಸಮಾಜಕ್ಕೆ ಹೆಚ್ಚು ಮಕ್ಕಳನ್ನು ಕೊಟ್ಟು ಭಾರ ಹೆಚ್ಚಿಸುವುದಿಲ್ಲ, ಲಿಂಗ ಭೇದವಿಲ್ಲದೆ ಮಾನವೀಯ ನೆಲೆಗಟ್ಟಿನಲ್ಲಿ ಜನಸಂಖ್ಯೆಯ ನಿಯಂತ್ರಣಗಳನ್ನು ಅಳವಡಿಸುತ್ತೇವೆ, ಯಾವುದೇ ಧರ್ಮ, ಜಾತಿ ಭೇದಗಳಿಲ್ಲದೆ ಹೆಚ್ಚು ಮಕ್ಕಳಾಗದಂಥಹ ವ್ಯವಸ್ಥಾತ್ಮಕ ಕಾರ್ಯಕ್ರಮಗಳನ್ನು ಒಪ್ಪಿಕೊಂಡು ಜನಸಂಖ್ಯೆ ಹೆಚ್ಚಳವಾಗದಂತೆ ನಿಗಾ ವಹಿಸುವುದು ಈ ಪ್ರಪ್ರಂಚದಲ್ಲಿನ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವೂ ಆಗಿದೆ ಎಂದು ತಿಳಿಸಿದರು.

ಈ ವೇಳೆಯಲ್ಲಿ ಮುಖ್ಯ ಅತಿಥಿಗಳಾಗಿ ತಾಲೂಕ ಆರೋಗ್ಯ ಅಧಿಕಾರಿ ಡಾ.ರಾಮಾಂಜನೇಯ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಯಲಕ್ಷ್ಮಿ, ಆರೋಗ್ಯ ಶಿಕ್ಷಣಾಧಿಕಾರಿ, ಅಂಗನವಾಡಿ ಹಾಗೂ ಆಶಾ ಮೇಲ್ವಿಚಾರಕರು, ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande