ಹೊಸಕನಕಾಪುರದಲ್ಲಿ ಎಸ್ಐಆರ್ ಜಾಗೃತಿ ಜಾಥಾ
ಕೊಪ್ಪಳ, 10 ಜುಲೈ (ಹಿ.ಸ.) ಆ್ಯಂಕರ್ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಕ್ರಮ ಹಮ್ಮಿಕೊಂಡಿದ್ದು ಬೂತ್ ಮಟ್ಟದ ಅಧಿಕಾರಿಗೆ ಅಗತ್ಯ ಮಾಹಿತಿ ನೀಡಲು ಸಹಕರಿಸಬೇಕೆಂದು ಕೊಪ್ಪಳ ತಾಲೂಕ ಪಂಚಾಯತ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್ ಅವರು ಕರೆ ನೀಡಿದರು
ವಿಶೇಷ ಸಮಗ್ರ ಪರಿಷ್ಕರಣೆ :  ಹೊಸಕನಕಾಪುರದ


ಕೊಪ್ಪಳ, 10 ಜುಲೈ (ಹಿ.ಸ.)

ಆ್ಯಂಕರ್ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಕ್ರಮ ಹಮ್ಮಿಕೊಂಡಿದ್ದು ಬೂತ್ ಮಟ್ಟದ ಅಧಿಕಾರಿಗೆ ಅಗತ್ಯ ಮಾಹಿತಿ ನೀಡಲು ಸಹಕರಿಸಬೇಕೆಂದು ಕೊಪ್ಪಳ ತಾಲೂಕ ಪಂಚಾಯತ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್ ಅವರು ಕರೆ ನೀಡಿದರು.

ಕೊಪ್ಪಳ ತಾಲೂಕ ಸ್ವೀಪ್ ಸಮಿತಿ, ಗಿಣಿಗೇರಾ ಗಾಮ ಪಂಚಾಯತಿ ಹಾಗೂ ಮುಕ್ಕುಂದ ಸುಮಿ ಸ್ಪೇಷಲ್ ಸ್ಟೀಲ್ ಲಿಮಿಟೆಡ್ ಕಂಪನಿ ನೌಕರರ ಸಹಯೋಗದಲ್ಲಿ ಹೊಸಕನಕಾಪುರ ಗ್ರಾಮದಲ್ಲಿ ಗುರುವಾರ (ಜು. 9ರಂದು) ಆಯೋಜಿಸಿದ್ದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ಕಾರ್ಯಕ್ರಮದ ಮೂಲಕ ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದು ಹಾಗೂ ಮರಣ ಹೊಂದಿರುವವರು, ಸ್ಥಳಾಂತರಗೊಂಡಿರುವವರು, ನಕಲು ಹೆಸರುಗಳು, ಮತ್ತು ಇತರ ಅನರ್ಹ ಮತದಾರರನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದು ಇದರ ಉದ್ದೇಶವಾಗಿದೆ. ಜೂನ್ 30 ರಿಂದ ಜುಲೈ 29 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಓ) ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ. ಮತದಾರರು ಎಸ್ಐಆರ್ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕೆಂದರು. ಬೂತ್ ಮಟ್ಟದ ಅಧಿಕಾರಿಯು ಪ್ರತಿ ಮನೆಗೆ 03 ಬಾರಿ ಭೇಟಿ ನೀಡಲಿದ್ದಾರೆ. ಅಗತ್ಯ ಮಾಹಿತಿಯನ್ನು ಪ್ರತಿಯೊಬ್ಬರು ಸಲ್ಲಿಸಲು ಇದೊಂದು ಸದಾವಕಾಶ ಹಾಗೂ ಹೊಸದಾಗಿ ಸೇರ್ಪಡೆಗೆ ಅವಕಾಶವಿದೆ ಎಂದರು.

ಮುಕಂದ ಸುಮಿ ಸ್ಪೇಷಲ್ ಸ್ಟೀಲ್ ಲಿಮಿಟೆಡ್ ಕಂಪನಿಯ ನೌಕರರಿಂದ ಕಾಲ್ನಡಿಗೆ ಜಾಗೃತಿ ಜಾಥಾವು ಕಂಪನಿ ಆವರಣದಲ್ಲಿ ಜರುಗಿತು. ಬಟಿಂಗ್ಸ್ ಪ್ರದರ್ಶನದಿಂದ ಕಾಲ್ನಡಿಗೆ ಜಾಥಾಕ್ಕೆ ಮೆರಗು ತಂದಿತು. 250 ಕ್ಕೂ ಹೆಚ್ಚು ಕಂಪನಿಯ ನೌಕರರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮುಕಂದ ಸುಮಿ ಸ್ಪೇಷಲ್ ಸ್ಟೀಲ್ ಲಿಮಿಟೆಡ್ ಕಂಪನಿಯ ಘಟಕದ ಮುಖ್ಯಸ್ಥರಾದ ಓಂ ಪ್ರವಲ್ ಸಿಂಗ್, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾದ ಮಂಜುನಾಥ್ ಕುಲಕರ್ಣಿ ಹಾಗೂ ಅಧಿಕಾರಿಗಳಾದ ಮಾರುತಿ ವೈ, ರಾಜಕುಮಾರ್ ಎಂ.ಜಿ., ಪಂಚಾಯತ ಅಭಿವೃದ್ಧಿ ಅಧಿಕಾರಿ ಮಂಜುಳಾದೇವಿ ಹೂಗಾರ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ಗ್ರಾಮ ಪಂಚಾಯತ ಕಾರ್ಯದರ್ಶಿ ಮಂಜುನಾಥ ಭಾವಿಕಟ್ಟಿ, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande